ದಾವಣಗೆರೆ: ಡಿಸೆಂಬರ್ ತಿಂಗಳ ಅನ್ನಭಾಗ್ಯ ಯೋಜನೆಯ ನಗದು ಹಣ ಜಮೆಯಾಗಿದೆಯೇ.. ? ಎಂದು ಚೆಕ್ ಮಾಡಲು ಈ ಮುಂದಿನ ಕ್ರಮ ಅನುಸರಿಸಬೇಕಿದೆ. ಜುಲೈ 10, 2023 ರಿಂದ ಪ್ರಾರಂಭಿಸಲಾದ ಈ ಯೋಜನೆಯಡಿಯಲ್ಲಿ ಹತ್ತು ಕೆಜಿ ಅಕ್ಕಿ ನೀಡುವ ಭರವಸೆಯನ್ನು ಕಾಂಗ್ರೆಸ್ ಸರ್ಕಾರ ನೀಡಿತ್ತು. ಆದರೆ, ಅಕ್ಕಿ ಕೊರತೆಯಿಂದ 5 ಕೆಜಿ ಅಕ್ಕಿ ಮತ್ತು ಉಳಿದ 5 ಕೆಜಿ ಅಕ್ಕು ಹಣವನ್ನು ಪಡಿತರ ಗ್ರಾಹಕರ ಖಾತೆಗೆ ನೇರ ನಗದು ಮೂಲಕ ಜಮೆ ಮಾಡಲು ಸರ್ಕಾರ ನಿರ್ಧರಿಸಿದೆ.
ಅನ್ನ ಭಾಗ್ಯ ಯೋಜನೆಯಡಿ, ಕರ್ನಾಟಕ ಸರ್ಕಾರವು ಫಲಾನುಭವಿಗಳಿಗೆ ಪ್ರತಿ ಕೆಜಿಗೆ 34 ರೂಪಾಯಿಗಳ ನಗದು ಪಾವತಿಸುತ್ತದೆ. ಉಚಿತ ಅಕ್ಕಿ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಗೆ, ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ, ಅಂತ್ಯೋದಯ ಕುಟುಂಬದ ಸದಸ್ಯರಿಗೆ 34 ರೂಪಾಯಿಯಂತೆ ನೀಡಲಾಗುತ್ತದೆ.
ಮಳೆ ಕೊರತೆ ಹಿನ್ನಲೆ ರಾಜ್ಯದಲ್ಲಿ ಅಕ್ಕಿ ಕೊರತೆ ಹೆಚ್ಚಳ ಅಧಿಕವಾಗುವ ಸಾಧ್ಯತೆ ಇದೆ. ಪ್ರತಿ ವರ್ಷ ಭತ್ತ ಬೆಳೆಗೆ ನಿರ್ಧಾರ ಮಾಡಲಾಗುವ ಗುರಿಗಿಂತ ಶೇಕಡ 35 ರಷ್ಟು ಭತ್ತ ಬೆಳೆ ಕಡಿಮೆಯಾಗಿದೆ. ಇದರಿಂದಾಗಿ ಅಕ್ಕಿ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ. ಈ ನಡುವೆ ಸರ್ಕಾರದ ಅನ್ನ ಭಾಗ್ಯ ಯೋಜನೆ ಮೇಲೆಯೂ ಇದು ಹೊರೆಯಾಗುವ ನಿರೀಕ್ಷೆಯಿದೆ.
- ಅನ್ನ ಭಾಗ್ಯ ಯೋಜನೆಯ ನಿಮ್ಮ ಖಾತೆಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಹಣ ಜಮೆಯಾಗಿದೆಯಾ ಎಂದು ಸ್ಟೇಟಸ್ ಪರಿಶೀಲಿಸಲು ಈ ಕ್ರಮ ಅನುಸರಿಸಿ…
- ಮೊದಲು ಕರ್ನಾಟಕ ಆಹಾರ ಇಲಾಖೆಯ ಅಧಿಕೃತ ವೆಬ್‌ಸೈಟ್ https://ahara.kar.nic.in/ ಗೆ ಭೇಟಿ ನೀಡಿ
- ಹೋಮ್‌ಪೇಜ್‌ನಲ್ಲಿ ಇ-ಸೇವೆಗಳ ಟ್ಯಾಬ್ ಅನ್ನು ಕ್ಲಿಕ್ ಮಾಡಿ
- ಡಿಬಿಟಿ ಸ್ಟೇಟಸ್ ಲಿಂಕ್ ಅನ್ನು ಕ್ಲಿಕ್ ಮಾಡಿ
- ತಿಂಗಳು, ವರ್ಷವನ್ನು ಆಯ್ಕೆ ಮಾಡಿ. ನಿಮ್ಮ ಪಡಿತರ ಚೀಟಿ ಸಂಖ್ಯೆ (ಆರ್‌ಸಿ ಸಂಖ್ಯೆ) ನಮೂದಿಸಿ ಮತ್ತು continue ಕ್ಲಿಕ್ ಮಾಡಿ
- ಆಗ ಡಿಬಿಟಿ ಸ್ಟೇಟಸ್ ಪರದೆಯ ಮೇಲೆ ಕಾಣಲಿದ್ದು, ನಿಮ್ಮ ಖಾತೆಯ ಸಂಪೂರ್ಣ ವಿವರ ಸಿಗಲಿದೆ