ಕೆಎಸ್ ಆರ್ ಟಿಸಿಯ 100 ಹೊಸ ವಿನ್ಯಾಸದ ಅಶ್ವಮೇಧ‌ ಬಸ್ ಗೆ ಸಿಎಂ‌ ಸಿದ್ದರಾಮಯ್ಯ ಚಾಲನೆ; ಈ ಬಸ್ ವಿಶೇಷತೆ ಏನು?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 100 ಹೊಸ ವಿನ್ಯಾಸದ ಅಶ್ವಮೇಧ – ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್ (Ashvamedha Classic bus) ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.ಪ್ರಯಾಣಿಕರಿಗೆ ಕೈಗೆಟುಕುವ ದರದಲ್ಲಿ ಸುಖಕರ ಪ್ರಯಾಣದ ಅನುಭವ ಒದಗಿಸುವ ಉದ್ದೇಶದಿಂದ ಅಶ್ವಮೇಧ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಪರಿಚಯಿಸಿದೆ.

ಬಸ್‌ಗಳ ವಿಶೇಷತೆ ಏನು?

  • ಪಾಯಿಂಟ್‌ ಟು ಪಾಯಿಂಟ್‌ ಎಕ್ಸಪ್ರೆಸ್‌ ಅಶ್ವಮೇಧ ಬಸ್‌ಗಳ ಎತ್ತರ 3.42 ಮೀಟರ್
  • ಈ ಬಸ್‌ನಲ್ಲಿ 52 ಆಸನಗಳ ವಿನ್ಯಾಸ
  • ಪ್ರಯಾಣದ ಮರು ಕಲ್ಪನೆ ಎಂಬ ಧ್ಯೇಯ ವಾಕ್ಯದೊಂದಿಗೆ ಬಸ್‌ಗಳ ಪರಿಚಯ
  • ವಿಶಾಲವಾಗಿ ಮುಂದಿನ ಮತ್ತು ಹಿಂದಿನ ಗಾಜುಗಳ ವಿನ್ಯಾಸ
  • ಕಿಟಕಿ ಫ್ರೇ ಮ್ ಹಾಗೂ ಗಾಜು ದೊಡ್ಡದಾಗಿದ್ದು, ಟಿಂಟೆಡ್ ಗಾಜುಗಳ ಅಳವಡಿಕೆ
  • ಬಸ್‌ನಲ್ಲಿ ಸ್ಥಳ ಟ್ರ್ಯಾಕರ್‌, ಪ್ಯಾನಿಕ್‌ ಬಟನ್‌ ಹಾಗೂ ಬಸ್‌ ಒಳಗೆ ಮುಂಭಾಗದಲ್ಲಿ ಎಲ್‌ಇಡಿ ಫಲಕ
  • ಲಗೇಜ್‌ ಕ್ಯಾರಿಯರ್‌ಗಳನ್ನು ವಿನೂತನವಾಗಿ ವಿನ್ಯಾಸ
  • ಮೇಲ್ಚಾವಣಿಯಲ್ಲಿ 2 ಸಾಲು ಗ್ರಾಬ್ ರೈಲ್.
    ಬಸ್ಸಿನ ಹಿಂದೆ ಮತ್ತು ಮುಂದೆ LED ಮಾರ್ಗ ಫಲಕ ಅಳವಡಿಕೆ
  • ಜಾಹೀರಾತು ಮಾದರಿಯ ಹ್ಯಾಂಡ್ ಗ್ರಿಪ್.
    F.R.P.ಡ್ಯಾಶ್ ಬೋರ್ಡ್
  • ಮೇಲ್ಚಾವಣಿ(ಸಲೂನ್) ಎಲ್.ಇ.ಡಿ. ಸ್ಕ್ರಿಪ್ಟ್ 2 ಸಂಖ್ಯೆ ಲೈಟ್
  • ಪ್ರವೇಶದ ಫುಟ್ ಸ್ಟೆಪ್ ಮೇಲೆ ಸ್ಕ್ರಿಪ್ಟ್ ಮಾದರಿಯ ಎಲ್‌ಇಡಿ ಬಲ್ಬ್ ಗಳು.
    ಬಸ್ ಮುಂಬದಿ, ಹಿಂಬದಿ ತಲಾ 1 ಕ್ಯಾಮರಾ ಅಳವಡಿಕೆ
  • ಎಲೆಕ್ಟ್ರಾನಿಕ್ ವಾಹನ ಸ್ಥಿರತೆ ನಿಯಂತ್ರಣ ಉಪಕರಣ ಅಳವಡಿಕೆ( EVSC)
    Bs-6OBD 2 ಕಂಪ್ಲೈಂಟ್
  • ವಾಹನಕ್ಕೆ ಟ್ರ್ಯಾಕಿಂಗ್ ಉಪಕರಣ, ಪ್ಯಾನಿಕ್ ಬಟನ್ ಗಳು ಮತ್ತು ಬಸ್ ನಿಲ್ದಾಣಗಳ ಮಾಹಿತಿ ನೀಡುವ ಧ್ವನಿವರ್ಧಕ ಯಂತ್ರಗಳ ಅಳವಡಿಕೆ

ಸಿಎಂ ಸಿದ್ದರಾಮಯ್ಯ, ಶಕ್ತಿ ಯೋಜನೆಯಡಿ 146 ಕೋಟಿ ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿನಿಯರು ಉಚಿತವಾಗಿ ಪ್ರಯಾಣ ಮಾಡಿದ್ದು, ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕವಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಈ ವರ್ಷ ಒಂದು ಸಾವಿರ ಬಸ್‌ಗಳನ್ನು ಸೇರ್ಪಡೆ ಮಾಡುತ್ತಿದ್ದು, ಇಂದು ನೂರು ಬಸ್ಸುಗಳ ಬಿಡುಗಡೆಯಾಗಿದೆ ಎಂದು ತಿಳಿಸಿದರು.

ರಾಜ್ಯದ ಜನರಿಗೆ 4 ನಿಗಮಗಳು ಬಸ್‌ ಸೇವೆ ಒದಗಿಸುತ್ತಿದೆ. ನಾಲ್ಕು ವರ್ಷಗಳಿಂದ ಹೊಸ ಬಸ್‌ಗಳನ್ನು ಸೇರ್ಪಡೆ ಮಾಡಿರಲಿಲ್ಲ. ಕೋವಿಡ್ ಸಂದರ್ಭದಲ್ಲಿ ಕೂಡ 3800 ಬಸ್‌ಗಳನ್ನು ಸ್ಥಗಿತಗೊಳಿಸಲಾಗಿತ್ತು. ನಾವು ಅಧಿಕಾರಕ್ಕೆ ಬಂದ ನಂತರ ಸಂಸ್ಥೆಗೆ 5800 ಬಸ್‌ಗಳನ್ನು ಸೇರ್ಪಡೆ ಮಾಡುತ್ತಿದ್ದೇವೆ. ಈ ರಾಜ್ಯದ ಜನರಿಗೆ ಸುರಕ್ಷಿತ ಮತ್ತು ಸರಾಗ ಪ್ರಯಾಣ ಮಾಡಲು ಅಗತ್ಯ ಅನುಕೂಲಗಳನ್ನು ಮಾಡಿಕೊಡಲಿದೆ ಎಂದು ತಿಳಿಸಿದರು.

ಸಿಬ್ಬಂದಿಗೆ ವಿಮಾ ಸೌಲಭ್ಯ: ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ವಿಮಾ ಸೌಲಭ್ಯವನ್ನು 1 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಕರ್ತವ್ಯದ ವೇಳೆ ಮೃತಪಡುವ ಸಿಬ್ಬಂದಿಗೆ ಪರಿಹಾರ ಮೊತ್ತವನ್ನು 3 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ.ಚುನಾವಣಾ ಪೂರ್ವದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಕ.ರ.ಸಾ.ಸಂ ಮತ್ತು ಇತರೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸುತ್ತೇವೆ ಎಂದು ಹೇಳಿದ್ದೆವು. ಬೆಲೆಯೇರಿಕೆ, ಹಣದುಬ್ಬರ, ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿರುವ ಪರಿಸ್ಥಿತಿಯಲ್ಲಿ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚು ಮಾಡಿದ್ದೇವೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2 ಸಾವಿರ ಬಸ್‌ಗಳನ್ನು ಖರೀದಿಸಲು ಮುಂದಾಗಿದ್ದು, ಹಂತ ಹಂತವಾಗಿ ಇದನ್ನು ಮಾಡುತ್ತಿದ್ದೇವೆ. ಅಇ ಮೂಲಕ ಜನ ಸೇವೆಯಲ್ಲಿ ನಮ್ಮ ಸರ್ಕಾರ ಇತಿಹಾಸ ಬರೆದಿದೆ.ಮಹಿಳೆಯರಿಗೆ ಅನುಕೂಲವಾಗಲು ಪಿಂಕ್ ಬಸ್‌ಗಳನ್ನು ಪರಿಚಯಿಸಲು ಸಚಿವ ರಾಮಲಿಂಗಾರೆಡ್ಡಿ ಅವರು ಮುಂದಾಗಿದ್ದಾರೆ. ಸಾರಿಗೆ ಇಲಾಖೆಯಲ್ಲಿ 10 ಸಾವಿರ ಸಿಬ್ಬಂದಿ ನೇಮಕಕ್ಕೆ ನಮ್ಮ ಸರ್ಕಾರ ಮುಂದಾಗಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ 52 ಸಾವಿರ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ಆರಂಭಿಸಲಾಗಿದೆ. ಆಮೂಲಕ ನಾವು ನಮ್ಮ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಕ.ರ.ಸಾ.ಸಂ ಅಧ್ಯಕ್ಷ ಗೋಪಿ ಶ್ರೀನಿವಾಸ್ , ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ಮೊದಲಾದವರು ಉಪಸ್ಥಿತರಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *