ಬೆಂಗಳೂರು: ಕೆಎಸ್ ಆರ್ ಟಿಸಿ ನೌಕರರ ಮೇಲೆ ಮರಾಠಿ ಪುಂಡರು ನಡೆಸಿದ ಅಟ್ಟಹಾಸ, ದಬ್ಬಾಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳು ನಾಳೆ (ಮಾ.22) ಕರ್ನಾಟಕ ಬಂದ್‌ಗೆ (Karnataka bandh) ಕರೆ ನೀಡಿವೆ.
ದಾವಣಗೆರೆ: ಅಡಿಕೆ ಧಾರಣೆ; ಸತತ ಕುಸಿತ ಬಳಿಕ ಭರ್ಜರಿ ಏರಿಕೆ – ಮಾ.21ರ ದರ ಎಷ್ಟಿದೆ..?
ಬೆಳಗ್ಗೆ 06 ಗಂಟೆಯಿಂದ ಸಂಜೆ 06 ಗಂಟೆವರೆಗೆ ಬಂದ್ ನಡೆಯಲಿದೆ ಎಂದು ಕನ್ನಡಪರ ಸಂಘಟನೆಗಳು ತಿಳಿಸಿವೆ. ಒಟ್ಟು 12 ಗಂಟೆಗಳ ಕಾಲ ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಲಾಗಿದೆ ಎಂದು ಕನ್ನಡ ಒಕ್ಕೂಟ-ಕರ್ನಾಟಕ ರಾಜ್ಯ ಸಂಘಟನೆ ಮಾಹಿತಿ ನೀಡಿದೆ.
ಕರ್ನಾಟಕ ಬಂದ್; ನಾಳೆ ಶಾಲಾ-ಕಾಲೇಜ್ ರಜೆ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಹೇಳಿಕೆ
ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದ ಈ ಬಂದ್‌ಗೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದರೆ, ಇನ್ನೂ ಕೆಲವು ಸಂಘಟನೆಗಳು ನೈತಿಕ ಬಂಬಲವಷ್ಟೇ ಕೊಟ್ಟಿವೆ. ರಾಜ್ಯ ಸರ್ಕಾರ ಕೂಡ ಬಂದ್‌ಗೆ ಬೆಂಬಲ ಸೂಚಿಸಿಲ್ಲ. ಪ್ರತಿಭಟನೆ ಮೂಲಕ ಬಂದ್‌ಗೆ ಕರೆ ಕೊಡುವ ಅವಶ್ಯಕತೆ ಇರಲಿಲ್ಲ. ತಮ್ಮ ಸಮಸ್ಯೆಗಳ ಕುರಿತಂತೆ ರಾಜ್ಯ ಸರ್ಕಾರದೊಂದಿಗೆ ಚರ್ಚೆ ನಡೆಸಬಹುದಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಏನಿರುತ್ತೆ? ಏನಿರಲ್ಲ?
ಬಂದ್‌ಗೆ ರಾಜ್ಯ ಸರ್ಕಾರ ಬೆಂಬಲ ಸೂಚಿಸದ ಹಿನ್ನೆಲೆ ಸರ್ಕಾರಿ ಬಸ್ ಸಂಚಾರ ಎಂದಿನಂತೆ ಇರಲಿದೆ. ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ತೆರೆದಿರಲಿವೆ. ಖಾಸಗಿ ಶಾಲೆಗಳ ಒಕ್ಕೂಟ ಬಂದ್‌ಗೆ ನೈತಿಕ ಬೆಂಬಲ ಸೂಚಿಸಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲ್ಲ. ಮಕ್ಕಳಿಗೆ ಪರೀಕ್ಷೆಗಳು ನಡೆಯುತ್ತಿದ್ದು, ರಜೆ ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.
ಬಿಎಂಟಿಸಿ, ನಮ್ಮ ಮೆಟ್ರೋ, ಕೆಎಸ್ಆರ್ಟಿಸಿ, ಆಸ್ಪತ್ರೆ ವೈದ್ಯಕೀಯ ಸೇವೆಗಳು, ಉಪಹಾರ ಕ್ಯಾಂಟೀನ್, ಹೋಟೆಲ್ಗಳು, ಶಾಲಾ-ಕಾಲೇಜು, ರೆಸ್ಟೋರೆಂಟ್, ಪಬ್ಗಳು ಎಂದಿನಂತೆ ತೆರದಿರಲಿವೆ. ಚಿತ್ರಮಂದಿರಗಳಲ್ಲಿ ಬೆಳಗ್ಗಿನ ಪ್ರದರ್ಶನ ನಡೆಯುವುದಿಲ್ಲ.ಓಲಾ, ಊಬರ್ ಆಟೋ, ಟ್ಯಾಕ್ಸಿ ಸೇವೆಗಳಲ್ಲಿ ವ್ಯತ್ಯಯ ಆಗುವ ಸಾಧ್ಯ ಇದೆ.