Connect with us

Dvgsuddi Kannada | online news portal | Kannada news online

ಸಿಎಂ ಮನೆಗೆ ಮುತ್ತಿಗೆ ಯತ್ನ; ಕರವೇ ಅಧ್ಯಕ್ಷ ನಾರಾಯಣಗೌಡ ವಶಕ್ಕೆ ಪಡೆದ ಪೊಲೀಸರು

ಪ್ರಮುಖ ಸುದ್ದಿ

ಸಿಎಂ ಮನೆಗೆ ಮುತ್ತಿಗೆ ಯತ್ನ; ಕರವೇ ಅಧ್ಯಕ್ಷ ನಾರಾಯಣಗೌಡ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆ ಸಿಎಂ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ  ಅಧ್ಯಕ್ಷ ನಾರಾಯಣಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನಲ್ಲಿ ಪ್ರತಿಭಟನೆಯ ಕಿಚ್ಚು ಭುಗಿಲೆದ್ದಿದ್ದು, ಗಾಂಧಿನಗರ, ಮೌರ್ಯ ವೃತ್ತ, ರೇಸ್ ಕೋರ್ಸ್ ರಸ್ತೆ, ಶಿವಾನಂದ ಸರ್ಕಲ್ ಗಳ ಮೂಲಕ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಬಂದ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನೊಂದೆಡೆ ಟೌನ್ ಹಾಲ್ ಬಳಿ ಕನ್ನಡಪರ ಹೋರಾಟಗಾರರು, ಟೈಯರ್ ಗೆ ಬೆಂಕಿ ಹಚ್ಚಿ, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಸ್ ಗಳಲ್ಲಿ ಕರೆದೊಯ್ದಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top