ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಇಂದು ಕನ್ನಡಪರ ಸಂಘಟನೆಗಳು ನೀಡಿರುವಂತ ಕರ್ನಾಟಕ ಬಂದ್ ಬಿಸಿ ಜನರಿಗೆ ತಟ್ಟಿಲ್ಲ. ರಾಜ್ಯಾದ್ಯಂತ ಕರ್ನಾಟಕ ಕೆಎಸ್ಆರ್ ಟಿ ಸಿ ಬಸ್ ಸಂಚಾರ ಎಂದಿನಂತೆ ಇದೆ. ಇನ್ನು ರಾಜಧಾನಿ ಬೆಂಗಳೂರಲ್ಲಿಯೂ ಕೂಡ ಬಿಎಂಟಿಸಿ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ.
ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡ ಪರ ಸಂಘಟನೆಗಳು ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಖಂಡಿಸಿ, ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದರು. ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ, ಸಾರಾ ಗೋವಿಂದ್ ಸೇರಿದಂತೆ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದರು.
ಬಂದ್ ಬಿಸಿ ಬೆಂಗಳೂರಲ್ಲಿ ಸ್ವಲ್ಪ ಮಟ್ಟಿಗೆ ಇದ್ದು, ರಾಜ್ಯದ ಇತರೆ ಜಿಲ್ಲೆಗಳಲ್ಲಿ ಕರ್ನಾಟಕ ಬಂದ್ ಬಿಸಿ ಅಷ್ಟೇನು ತಟ್ಟಿಲ್ಲ. ಇಂದು ಕೂಡ ಎಂದಿನಂತೆ ಸಾರಿಗೆ ಸಂಚಾರ ನಾರ್ಮಲ್ ಆಗಿತ್ತು



