ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರಿನ ಟೌನ್ ಹಾಲ್ ಬಳಿ ಕರ್ನಾಟಕ ಬಂದ್ ನಲ್ಲಿ ನಿರತರಾಗಿದ್ದ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್, ಸಾರಾ ಗೋವಿಂದ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ
ಕನ್ನಡಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದ್ದರು. ಸರ್ಕಾರದ ವಿರುದ್ಧ ಘೋಷಣೆ ಕೂದಿದರು. ಈ ವೇಳೆ ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದರು. ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆಸುತ್ತಿವೆ. ಈ ವೇಳೆ ವಾಟಾಳ್ ನಾಗರಾಜ್, ಸಾರಾ ಗೋವಿಂದ್ ಸೇರಿದಂತೆ ಅನೇಕ ಕನ್ನಡಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.



