ಬೆಂಗಳೂರು: ಕರ್ನಾಟಕ ಬಂದ್ ಗೊಂದಲ ಕೊನೆಗೂ ಬಗೆಹರಿದಂತಾಗಿದೆ. ನಾಳೆ (ಡಿ. 31)ಕರ್ನಾಟಕ ಬಂದ್ ಗೆ ಕರೆ ನೀಡಿದ್ದ ಕನ್ನಡಪರ ಸಂಘಟನೆಗಳು ಇದೀಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕನ್ನಡಪರ ಸಂಘಟನೆಗಳ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಿಗಾಗಿ ನಾಳೆ ಕರ್ನಾಟಕ ಬಂದ್ ಇರುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಕನ್ನಡಪರ ಹೋರಾಟಗಾರರಾದ ವಾಟಾಳ್ ನಾಗರಾಜ್, ಪ್ರವೀಣ್ಕುಮಾರ್ ಶೆಟ್ಟಿ, ಸಾ.ರಾ.ಗೋವಿಂದು ಅವರು ಬಂದ್ಗೆ ಕರೆ ನೀಡಿದ್ದರು. ಬಂದ್ ನಡೆಸದಂತೆ ಸಿಎಂ ಮನವಿ ಮಾಡಿದ್ದರು.ಕೊನೆಗೂ ಅವರು ಬಂದ್ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿಸಿದ್ದಾರೆ.
ಎಂಇಎಸ್ ಬಗ್ಗೆ ಸರ್ಕಾರ ಏನು ಮಾಡಬೇಕೋ ಅದನ್ನು ಮಾಡುತ್ತದೆ. ಹೀಗಾಗಿ ನಾಳೆ ಬಂದ್ ಇರುವುದಿಲ್ಲ. ಈಗಾಗಲೇ ಘೋಷಿಸಲಾಗಿರುವ ಬಂದ್ ಮುಂದೂಡಲಾಗಿದ್ದು, ಹೊಸ ದಿನಾಂಕ ತಿಳಿಸಲಾಗುವುದು. ಬಂದ್ ಬದಲಿಗೆ ನಾಳೆ ಬೆಳಗ್ಗೆ 10.30ಕ್ಕೆ ಪುರಭವನದಿಂದ ಕೆಂಪೇಗೌಡ ಬಸ್ ನಿಲ್ದಾಣ, ಸ್ವಾತಂತ್ರ್ಯ ಉದ್ಯಾನದವರೆಗೆ ಕನ್ನಡಪರ ಸಂಘಟನೆಗಳಿಂದ ಬೃಹತ್ ಮೆರವಣಿಗೆ ನಡೆಯಲಿದೆ ಎಂದು ಅವರು ಸ.ರಾ ಗೋವಿಮದ್ ತಿಳಿಸಿದ್ದಾರೆ.