ತಾಂಡಾ ನಿಗಮದಿಂದ ತರಬೇತಿ; ಒಂದು ಸಾವಿರ ಅಭ್ಯರ್ಥಿಗಳಿಗೆ ಊಟ, ವಸತಿಯೊಂದಿಗೆ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಬಂಜಾರ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ / ಯುವತಿಯರಿಗೆ ಬಂಜಾರ ಸಂಸ್ಕೃತಿ, ಸಂವಿಧಾನದ ಹಾಗೂ ವೃತ್ತಿ ತರಬೇತಿ ಕುರಿತು ಅರಿವು ಮೂಡಿಸಲು ತರಬೇತಿ ಕಾರ್ಯಾಗಾ ಏರ್ಪಡಿಸಿದ್ದು, ಆನ್ ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಸಂತ್ ಸೇವಾಲಾಲ್ ಜನ್ಮ ಸ್ಥಳವಾದ ಬಾಯಗಡ್, ನ್ಯಾಮತಿ ತಾಲ್ಲೂಕು, ದಾವಣಗೆರೆ ಜಿಲ್ಲೆ, ಇಲ್ಲಿ ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ, ಬೆಂಗಳೂರು ಇವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ.

ಪ್ರತಿ ತಂಡದಲ್ಲಿ 250 ಅಭ್ಯರ್ಥಿಗಳಂತೆ, 02 ದಿನದ ಕಾರ್ಯಗಾರವನ್ನು, ಒಟ್ಟು 04 ತಂಡಗಳಲ್ಲಿ 1000 ಅಭ್ಯರ್ಥಿಗಳಿಗೆ ಊಟ ವಸತಿ ಹಾಗೂ ಸಾರಿಗೆ ವ್ಯವಸ್ಥೆಯೊಂದಿಗೆ ವೃತ್ತಿ ತರಬೇತಿ, ಬಂಜಾರ ಸಂಸ್ಕೃತಿ ಹಾಗೂ ಸಂವಿಧಾನದ ಕುರಿತು ಅರಿವು ಮೂಡಿಸಲು ನುರಿತ ತರಬೇತುದಾರರಿಂದ ತರಬೇತಿ ನೀಡುವ ಕಾರ್ಯಗಾರವನ್ನು ಆಯೋಜಿಸಲಾಗುತ್ತಿದೆ.

ಇದಕ್ಕೆ ಅಗತ್ಯವಿರುವ ಅರ್ಹತೆ ಪಿ.ಯು.ಸಿ ಮತ್ತು ಮೇಲ್ಪಟ್ಟು ಯಾವುದೇ ಪದವಿ/ ಸ್ನಾತಕೋತ್ತರ ಪದವಿ ಹಾಗೂ ಅದಕ್ಕೂ ಮೇಲ್ಪಟ್ಟ ವಿದ್ಯಾಭ್ಯಾಸವನ್ನು ಹೊಂದಿರುವ ಬಂಜಾರ ಸಮುದಾಯದ ಅಭ್ಯರ್ಥಿಗಳಾಗಿರಬೇಕು. ಆಸಕ್ತರು ನಿಗಮದ ವೆಬ್ಸೈಟ್ https://banjarathanda.karnataka.gov ಮೂಲಕ ಅರ್ಜಿ ಸಲ್ಲಿಸಬಹುದು.

ಎರಡು ದಿನಗಳ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಮಾಣ ಪತ್ರ ನೀಡಲಾಗುವುದು ಯಾವುದೇ ನೋಂದಾಣಿ ಶುಲ್ಕವಿರುವುದಿಲ್ಲ, ತರಬೇತಿ ಸಂಪೂರ್ಣ ಉಚಿತವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ, ಬಂಜಾರ ಭವನ, 1ನೇ ಮಹಡಿ, #16 ಕೆ. ಮಿಲ್ಲರ್ ಟ್ಯಾಂಕ್ ಬಂಡ್ ರಸ್ತೆ (ತಿಮ್ಮಯ್ಯ ರಸ್ತೆ) ವಸಂತನಗರ, ಬೆಂಗಳೂರು-52 ಅಥವಾ ದೂರವಾಣಿ ಸಂಖ್ಯೆ : 080-2225 5561, 62,63,65 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *