ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ಮಾಡಲಾಗಿದೆ. ಖೂಬಾ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಖೂಬಾಗೆ ಟಿಕೆಟ್ ನೀಡದೇ ಶರಣು ಸಲಗಾರ ಅವರಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಇದರಿಂದ ಬೇಸರಗೊಂಡಿದ್ದ ಮಲ್ಲಿಕಾರ್ಜುನ ಖೂಬಾ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ಶಿಸ್ತು ಉಲ್ಲಂಘಿಸಿದ ಕಾರಣಕ್ಕೆ ಖೂಬಾ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟಿಸಿದೆ.



