ನವದೆಹಲಿ : ಬಿಬಿಎಪಿ ಚುನಾವಣೆ ಸಂಬಂಧ ಹೈ ಕೋರ್ಟ್ ನೀಡಿದ್ದಂತ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ರಾಜ್ಯ ಚುನಾವಣಾ ಆಯೋಗಕ್ಕೆ ಈ ಸಂಬಂಧ ನೋಟಿಸ್ ಜಾರಿ ಮಾಡಿದೆ. ಇದರಿಂದ ರಾಜ್ಯ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದಂತಾಗಿದ್ದು, ಚುನಾವಣೆ ಮುಂದೂಡಿಕೆ ಆಗುವ ಸಾಧ್ಯತೆ ಇದೆ.
ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿತು. ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠ, ಸಿಇಸಿ ಮತ್ತು ಎಂ.ಶಿವರಾಜು ಮತ್ತಿತರರಿಂದ ಉತ್ತರವನ್ನು ಕೋರಿದ್ದು, ನೋಟಿಸ್ ಜಾರಿ ಮಾಡಿದೆ. ಬಿಬಿಎಂಪಿ ಚುನಾವಣೆ ನಡೆಯುವುದು ಅನುಮಾನ ಎನ್ನುವಂತಾಗಿದೆ.
ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಜನವರಿಗೆ ಮುಂದೂಡಿರುವ ಕಾರಣ, ಅಂದಿನ ತೀರ್ಪಿನತ್ತ ಎಲ್ಲರ ಚಿತ್ತ ನೆಟ್ಟಿದೆ. 198 ವಾರ್ಡ್ ಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಆದೇಶಿಸಿತ್ತು. ಚುನಾವಣಾ ಕಾರ್ಯಕ್ರಮವನ್ನು ಆರು ವಾರಗಳ ಒಳಗೆ ಪ್ರಕಟಿಸುವಂತೆಯೂ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು. ಈ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಲಾಗಿದೆ.