ಬೆಳಗಾವಿ: ರಾಜ್ಯದಲ್ಲಿ ವಿದ್ಯುತ್ ಕಳವು ಹಾಗೂ ವಿದ್ಯುತ್ ದುರ್ಬಳಕೆಯ ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಜಾಗೃತದಳ (ವಿಜಿಲೆನ್ಸ್) ಘಟಕವನ್ನು ಪೊಲೀಸ್ ಅಧೀಕ್ಷಕರು / ಪೊಲೀಸ್ ಉಪ ಅಧೀಕ್ಷಕರು ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ನೇತೃತ್ವದಲ್ಲಿ ರಚಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ (K J george) ತಿಳಿಸಿದ್ದಾರೆ.
ಪರವಾನಗಿ ಭೂ ಮಾಪಕರ ಖಾಯಂ ಅಸಾಧ್ಯ: ಕಂದಾಯ ಸಚಿವ ಕೃಷ್ಣ ಬೈರೇಗೌಡ
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ರ ಉತ್ತರಿಸಿದ ಅವರು, ಪ್ರತಿ ಜಿಲ್ಲಾಮಟ್ಟದಲ್ಲಿ ಜಾಗೃತದಳ ಪೊಲೀಸ್ ಠಾಣೆಗಳಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ / ಸಬ್ ಇನ್‌ಸ್ಪೆಕ್ಟರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಮತ್ತು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕನಿಷ್ಟ ದಾಖಲೆ ಇದ್ದರೂ ರೈತರ ಮನೆಬಾಗಿಲಿಗೆ ಸರ್ಕಾರದಿಂದ ಪೋಡಿ ದುರಸ್ಥಿ: ಕಂದಾಯ ಸಚಿವ
ಜಾಗೃತದಳವು ಸ್ಥಳೀಯ ವಿದ್ಯುತ್ ಸರಬರಾಜು ಕಂಪನಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿದೆ. ಜಾಗೃತದಳವು ನಿಯಮಿತವಾಗಿ ಕಾಲ ಕಾಲಕ್ಕೆ ತಪಾಸಣೆ / ಅನಿರೀಕ್ಷಿತ ದಾಳಿ ನಡೆಸುವ ಮೂಲಕ ವಿದ್ಯುತ್ ಕಳ್ಳತನ / ವಿದ್ಯುತ್ ದುರ್ಬಳಕೆ ಪ್ರಕರಣಗಳನ್ನು ತಡೆಗಟ್ಟಲು ಕ್ರಮ ವಹಿಸುತ್ತಿದ್ದು, ವಿದ್ಯುತ್ ಕಳ್ಳತನ ಕಂಡುಬಂದ ತಕ್ಷಣ ಸ್ಥಳೀಯ ವಿದ್ಯುತ್ ಸರಬರಾಜು ಕಂಪನಿಗಳ ಸಿಬ್ಬಂದಿಗಳ ಮೂಲಕ ವಿದ್ಯುತ್ ನಿಲುಗಡೆಗೊಳಿಸಿ ನಿಯಮಾನುಸಾರ ಪ್ರಕರಣವನ್ನು ದಾಖಲಿಸುತ್ತಿದೆ.
1600 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ
ಪ್ರತಿ ಪೊಲೀಸ್ ಠಾಣಾ ಮಟ್ಟದಲ್ಲಿ ವಿಶೇಷ ದಾಳಿ ದಳಗಳನ್ನು ಸಹ ರಚಿಸಿ ಸಾಮೂಹಿಕ ತಪಾಸಣೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ವಿದ್ಯುತ್ ಕಳ್ಳತನ / ದುರ್ಬಳಕೆ ಕಂಡುಬಂದರೆ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.ಭಾರತೀಯ ವಿದ್ಯುಚ್ಛಕ್ತಿ ಕಾಯಿದೆ 2003 ರ ಸೆಕ್ಷನ್ 126 ಮತ್ತು 135 ರ ಅಡಿಯಲ್ಲಿ ಕ್ರಮವಾಗಿ ಅಸಂಜ್ಞೆಯ ಹಾಗೂ ಸಂಜ್ಞೆಯ ಪ್ರಕರಣಗಳನ್ನು ಜಾಗೃತದಳ ಪೊಲೀಸ್ ಠಾಣೆಗಳಲ್ಲಿ ದಾಖಲಿಸಿ, ತನಿಖೆ ನಡೆಸಿ, ಕೆ.ಇ.ಆರ್.ಸಿ. ಸೂಚಿಸಿರುವ ವಿದ್ಯುತ್ ಸರಬರಾಜು ನಿಬಂಧನೆಗಳ ಪ್ರಕಾರ ದಂಡ ವಿಧಿಸಲಾಗುತ್ತಿದೆ.ಸೆಕ್ಷನ್ 135 ಅಡಿಯಲ್ಲಿ ದಾಖಲಾಗುವ ಪ್ರಕರಣಗಳನ್ನು ವಿಶೇಷ ನ್ಯಾಯಾಲಯಗಳಲ್ಲಿ ವಿಚಾರಣೆಗೊಳಪಡಿಸಲಾವುದು.



