Connect with us

Dvgsuddi Kannada | online news portal | Kannada news online

ಬಿಜೆಪಿ ಮಾಜಿ ಸಚಿವರ ಹೆಸರು ಬರೆದಿಟ್ಟು ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಪ್ರಮುಖ ಸುದ್ದಿ

ಬಿಜೆಪಿ ಮಾಜಿ ಸಚಿವರ ಹೆಸರು ಬರೆದಿಟ್ಟು ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು:ಬಿಜೆಪಿ ಮಾಜಿ ಸಚಿವರ ಹೆಸರು ಬರೆದಿಟ್ಟು ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ಘಟನೆ ನಡೆದಿದೆ.

ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ನಿವಾಸಿಯಾಗಿರುವ ಪ್ರದೀಪ್ , ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ಹೆಸರನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಮಾಜಿ ಸಚಿವ ಅರವಿಂದ ಲಿಂಬಾವಳಿ, ಜಿ. ರಮೇಶ ರೆಡ್ಡಿ, ಕೆ. ಗೋಪಿ, ಜಯರಾಮರೆಡ್ಡಿ, ರಾಘವಭಟ್ ಮತ್ತು ಸೋಮಯ್ಯ ಅವರ ಹೆಸರನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ.

ಆರು ಜನರ ಮೇಲೆ ಕ್ರಮ ಜರುಗಿಸಿ ನನ್ನ ಸಾವಿಗೆ ನ್ಯಾಯ ಒದಗಿಸಿ ಎಂದು ಬರೆಯಲಾಗಿದೆ. ಹೆಸರುಗಳ ಮುಂದೆ ಮೊಬೈಲ್ ನಂಬರ್ ಬರೆದು ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆ. ಗೋಪಿ ಮತ್ತು ಸೋಮಯ್ಯ ಅವರಿಗೆ ಅರವಿಂದ ಲಿಂಬಾವಳಿ ಬೆಂಬಲ ನೀಡಿದ್ದರು. ಹಣಕಾಸಿನ ವ್ಯವಹಾರದಲ್ಲಿ ವಂಚನೆ ಹಿನ್ನೆಲೆ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ಆರು ಜನರ ಹೆಸರನ್ನು ಉಲ್ಲೇಖಿಸಿದ್ದಾರೆ ಎಂದು ಹೇಳಲಾಗಿದೆ. ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top