Connect with us

Dvgsuddi Kannada | online news portal | Kannada news online

ಭದ್ರಾ ಡ್ಯಾಂನಿಂದ ತುಂಗಭದ್ರಾ ನದಿಗೆ ಇಂದಿನಿಂದ1.60 ಟಿಎಂಸಿ ನೀರು; ನದಿ ಪಾತ್ರದ ಸಾರ್ವಜನಿಕರಲ್ಲಿ ಎಚ್ಚರಿಕೆ..!

ದಾವಣಗೆರೆ

ಭದ್ರಾ ಡ್ಯಾಂನಿಂದ ತುಂಗಭದ್ರಾ ನದಿಗೆ ಇಂದಿನಿಂದ1.60 ಟಿಎಂಸಿ ನೀರು; ನದಿ ಪಾತ್ರದ ಸಾರ್ವಜನಿಕರಲ್ಲಿ ಎಚ್ಚರಿಕೆ..!

ಭದ್ರಾವತಿ: 2020-21ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತ ಬೆಳೆಗಳನ್ನು ಸಂರಕ್ಷಿಸಲು ಸುಮಾರು 1.60 ಟಿ.ಎಂ.ಸಿ ನೀರನ್ನು ತುಂಗಭದ್ರಾ ನದಿಗೆ ಬಿಡಲಾಗುತ್ತಿದೆ.  ಮಾ.18 ರಿಂದ ಏ.01 ರವರೆಗೆ ಪ್ರತಿದಿನ 1200 ಕ್ಯೂಸೆಕ್ಸ್‍ನಂತೆ ಭದ್ರಾ ನದಿಗೆ ಹರಿಸಲಾಗುತ್ತಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲಿ, ದನಕರುಗಳನ್ನು ನದಿಗೆ ಇಳಿಸುವುದಾಗಲಿ ಅಥವಾ ನಗಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ನೀರು ಹರಿಸುವ ಅವಧಿಯಲ್ಲಿ ರೈತಬಾಂಧವರು ನದಿ ದಂಡೆಯಲ್ಲಿ ಅಳವಡಿಸಿರುವ ಅಕ್ರಮ ಪಂಪ್‍ಸೆಟ್‍ಗಳನ್ನು  ತೆರವುಗೊಳಿಸಬೇಕು ಎಂದು ಬಿ.ಆರ್.ಪ್ರಾಜೆಕ್ಟ್‍ನ ಕ.ನೀ.ನಿ.ನಿ.ಭದ್ರಾ ಯೋಜನಾ ವೃತ್ತ ಅಧೀಕ್ಷಕ ಅಭಿಯಂತರರಾದ ಎಂ.ಚಂದ್ರಹಾಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top