ದಾವಣಗೆರೆ: ಸರ್ಕಾರ ಬಿಪಿಎಲ್ ಕಾರ್ಡ್‌ಗಳನ್ನು ಏಕಾಏಕಿಯಾಗಿ ರದ್ದುಪಡಿಸುವ ಮೂಲಕ ಬಡವರ ಮೇಲೆ ಗದಾಪ್ರಹಾರ ಮಾಡಲು ಹೊರಟಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ಬಂದ್ ಮಾಡಲು ಪರಿಷ್ಕರಣೆಗೆ ಮುಂದಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದರು.
ಹೊನ್ನಾಳಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ 5 ಕೆ.ಜಿ., ರಾಜ್ಯ ಸರ್ಕಾರದಿಂದ ಈ ಮೊದಲು ಹಣ ಕೊಟ್ಟು, ಇದೀಗ ಅಕ್ಕಿ ನೀಡಲಾಗುತ್ತಿದೆ. ಹೀಗಿರುವಾಗ ಬಿಪಿಎಲ್ ಕಾರ್ಡ್‌ಗಳ ರದ್ದು ಮಾಡಲಾಗುತ್ತಿದೆ ಎಂದು ಟೀಕಿಸಿದರು. ಈ ಬಗ್ಗೆ ಫಲಾನುಭವಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರಿಂದ 80 ಪರ್ಸೆಂಟ್ ಕಮಿಷನ್ ಪಡೆಯುತ್ತಿದೆ ಎಂಬ ಆರೋಪ ಎದುರಿಸುತ್ತಿದೆ. ಇದಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ರಾಹುಲ್ ಗಾಂಧಿ ಅವರೇ ಉತ್ತರಿಸಬೇಕು ಎಂದು ಹೇಳಿದರು.
ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ಜೆ.ಕೆ.ಸುರೇಶ್, ಸಿ.ಆರ್. ಶಿವಾನಂದ, ಬಡಾವಣೆ ರಂಗಪ್ಪ, ಕರಿಬಸಪ್ಪ ರೆಡ್ಡಿ, ತಿಮ್ಲಾಪುರ ಶಿವನಗೌಡ ಮುಂತಾದವರು ಇದ್ದರು.