ಬೆಂಗಳೂರು: ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಬಡತನ ರೇಖೆಗಿಂತ ಮೇಲಿರುವರನ್ನು ಗುರುತಿಸಿ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಬಿಪಿಎಲ್ ಕಾರ್ಡ್ ಅಡಿಯಲ್ಲಿ ಪಡೆಯುವ ಎಲ್ಲಾ ಯೋಜನೆ ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಯಾವುದೇ ಕಾರ್ಡ್ ಗಳನ್ನು ರದ್ದು ಮಾಡುವುದಿಲ್ಲ. ಆದರೆ, ಅನರ್ಹರನ್ನು ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಕಾರ್ಡ್ ಗೆ ವರ್ಗಾಯಿಸಲಾಗುತ್ತಿದೆ ಎಂದು ಹೇಳಿದ್ದಾರೆ.
- ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಶಾಕ್
- ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಕಾರ್ಡ್ ಗೆ ವರ್ಗಾವಣೆ
- ಯಾವುದೇ ಕಾರ್ಡ್ ರದ್ದು ಮಾಡುವುದಿಲ್ಲ
- ಸ್ಥಿರ ಆರ್ಥಿಕ ಹೊಂದಿರುವ ವ್ಯಕ್ತಿಗಳು, ಆದಾಯ ತೆರಿಗೆ ಪಾವತಿಸುವ ವ್ಯಕ್ತಿಗಳ ಕಾರ್ಡ್ ಎಪಿಎಲ್ ಗೆ ವರ್ಗಾವಣೆ
- ರಾಜ್ಯದ ಜನಸಂಖ್ಯೆಯ ಶೇ. 80ರಷ್ಟು ಜನರಿಗೆ ಬಿಪಿಎಲ್ ಕಾರ್ಡ್
ಸುದ್ದಿಗಾರರೊಂದಿಗೆ ಮಾತನಾಡಿದ ಪಡಿತರ ಚೀಟಿ ವಿಚಾರವನ್ನು ಸಮ್ಮನೇ ರಾಜಕೀಯಗೊಳಿಸುವುದು ಸರಿಯಲ್ಲ. ಸರ್ಕಾರ ಯಾವುದೇ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ರದ್ದು ಮಾಡಿಲ್ಲ. ಅನರ್ಹ ಬಿಪಿಎಲ್ ಕಾರ್ಡುದಾರರನ್ನು ರದ್ದು ಮಾಡಿಲ್ಲ ಬದಲಾಗಿ ಎಪಿಎಲ್ ವರ್ಗಕ್ಕೆ ವರ್ಗಾಯಿಸಲಾಗಿದೆ ಎಂದರು.
ರಾಜ್ಯದ ಜನಸಂಖ್ಯೆಯ ಶೇ. 80ರಷ್ಟು ಜನರು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದಾರೆ. ಕೆಲವು ಅನರ್ಹ ವ್ಯಕ್ತಿಗಳು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದಾರೆ ಎಂಬ ಮಾಹಿತಿ ಬಂದಿದೆ. ನಾವು ಅಂತಹ ಕಾರ್ಡ್‌ಗಳನ್ನು ಮರುವರ್ಗೀಕರಿಸುವ ಕೆಲಸ ಮಾಡುತ್ತಿದ್ದೇವೆ. ಅವುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವುದಿಲ್ಲ, ಆದರೆ ಅವುಗಳನ್ನು ಎಪಿಎಲ್ ವರ್ಗಕ್ಕೆ ವರ್ಗಾಯಿಸುತ್ತೇವೆ.
ಸ್ಥಿರ ಆರ್ಥಿಕ ಹೊಂದಿರುವ ವ್ಯಕ್ತಿಗಳು, ಆದಾಯ ತೆರಿಗೆ ಪಾವತಿಸುವ ವ್ಯಕ್ತಿಗಳು ಸೇರಿದಂತೆ ಬಿಪಿಎಲ್ ಕಾರ್ಡ್‌ಗೆ ಅನರ್ಹರಾಗಿರುವವರನ್ನು ಎಪಿಎಲ್ ವರ್ಗಕ್ಕೆ ವರ್ಗಾಯಿಸಲಾಗುವುದು. ಎಪಿಎಲ್ ಕಾರ್ಡುದಾರರು ಅವರಿಗೆ ನಿಗದಿತ ಪ್ರಯೋಜನಗಳನ್ನು ಪಡೆಯುವುದನ್ನು ಮುಂದುವರಿಸುತ್ತಾರೆ ಎಂದು ಹೇಳಿದರು.
ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣದಂತಹ ರಾಜ್ಯಗಳಲ್ಲಿ, ಬಿಪಿಎಲ್ ಕಾರ್ಡುದಾರರ ಶೇಕಡಾವಾರು ಶೇಕಡಾ 50 ಕ್ಕಿಂತ ಕಡಿಮೆಯಿದೆ. ನಮ್ಮ ರಾಜ್ಯದಲ್ಲಿ ಶೇ. 80ರಷ್ಟು ಬಿಪಿಎಲ್ ಕಾರ್ಡುದಾರರ ಇದ್ದಾರೆ. ರಾಜ್ಯದ 6.5 ಕೋಟಿ ಜನಸಂಖ್ಯೆಯಲ್ಲಿ 4.6 ಕೋಟಿ ಫಲಾನುಭವಿಗಳಾಗಿದ್ದಾರೆ.
ನಾವು ಅನರ್ಹ ಬಿಪಿಎಲ್ ಕಾರ್ಡುದಾರರನ್ನು ಎಪಿಎಲ್ ವರ್ಗಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆ ಶುರುವಾಗಿದೆ. ಹೊಸ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಸಲು ಯಾವುದೇ ತೊಂದರೆ ಇಲ್ಲ.ಅನರ್ಹ ಬಿಪಿಎಲ್ ಕಾರ್ಡುದಾರರನ್ನು ಮಾತ್ರ ಮರು ವರ್ಗೀಕರಿಸಲಾಗುತ್ತಿದೆ ಎಂದರು