Connect with us

Dvgsuddi Kannada | online news portal | Kannada news online

ಈ ಬಾರಿಯ ಬಜೆಟ್ ನಲ್ಲಿ ಸಿಎಂ ಯಡಿಯೂರಪ್ಪ ‘ಕೃಷಿ ಕ್ಷೇತ್ರ’ಕ್ಕೆ ಏನು ಕೊಡುಗೆ ನೀಡಿದ್ದಾರೆ ಗೊತ್ತಾ..?

ಪ್ರಮುಖ ಸುದ್ದಿ

ಈ ಬಾರಿಯ ಬಜೆಟ್ ನಲ್ಲಿ ಸಿಎಂ ಯಡಿಯೂರಪ್ಪ ‘ಕೃಷಿ ಕ್ಷೇತ್ರ’ಕ್ಕೆ ಏನು ಕೊಡುಗೆ ನೀಡಿದ್ದಾರೆ ಗೊತ್ತಾ..?

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 2021-22ನೇ ಸಾಲಿನ ಆಯವ್ಯಯ ಮಂಡಿಸಿದ್ದು, ಅದರಲ್ಲಿ ಕೃಷಿ ಕ್ಷೇತ್ರಕ್ಕೆ ಪ್ರಾಮುಖ್ಯತೆ ಕೊಟ್ಟಿದ್ದಾರೆ. ಕೃಷಿ ಹಾಗೂ ಪೂರಕ ಚಟುವಟಿಕೆಗೆ ಒಟ್ಟಾರೆ ಬಜೆಟ್ ನಲ್ಲಿ 31,028 ಕೋಟಿ. ರೂ. ಮೀಸಲು ಇಡಲಾಗಿದೆ.

ಸಾವಯವ ಕೃಷಿಯ ಉತ್ತೇಜನಕ್ಕೆ ಕ್ರಮ, ರೇಷ್ಮೆ ಕೃಷಿಕರಿಗಾಗಿ ಯೋಜನೆ, ಕೃಷಿ ಮಾರುಕಟ್ಟೆಗಳ ಅಭಿವೃದ್ಧಿಗೆ ಯೋಜನೆಗಳು ಸೇರಿದಂತೆ ಕೃಷಿ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು, ಅನುದಾನಗಳನ್ನು 2021–22ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿದೆ.  ಗುಣಮಟ್ಟದ ಬಿತ್ತನೆ ಬೀಜ ಲಭ್ಯತೆ, ಬೆಳೆ ನಿರ್ವಹಣೆ, ಕೊಯ್ಲೋತ್ತರ ನಿರ್ವಹಣೆ, ಸಂಗ್ರಹಣೆ, ಸಂಸ್ಕರಣೆ,ಮಾರಾಟ ಅನುದಾನ ಒದಗಿಸಿದ್ದಾರೆ.

  • ಸಾವಯವ ಕೃಷಿ ಉತ್ತೇಜನಕ್ಕೆ 500 ಕೋಟಿ
  • ವಿಜಯಪುರ ಜಿಲ್ಲೆ ಇಟ್ಟಂಗಿಹಾಳ ಗ್ರಾಮದಲ್ಲಿ ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿ ಆಹಾರ ಪಾರ್ಕ್
  • ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ ಇರುವ ಮೀಸಲಾತಿ ಶೇ 50ಕ್ಕೆ ಹೆಚ್ಚಳ
  • ಸಣ್ಣ ಟ್ರ್ಯಾಕ್ಟರ್ ಗಳಿಗೆ ನೀಡುತ್ತಿದ್ದ ಸಹಾಯಧನ 24-25 ಪಿಟಿಒ ಎಚ್‌ಪಿ ಟ್ರ್ಯಾಕ್ಟರ್‌ಗಳಿಗೂ ವಿಸ್ತರಣೆ.
  •  ರಾಷ್ಟ್ರೀಯ ಇ-ಮಾರುಕಟ್ಟೆ ಪ್ರೈವೇಟ್ ಲಿಮಿಟೆಡ್ ಮೂಲಕ ಸಾವಯವ ಮತ್ತು ಸಿರಿಧಾನ್ಯಗಳ ವೈಜ್ಞಾನಿಕ ಮಾರಾಟ
  • ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನಕ್ಕೆ 2021-22ನೇ ಸಾಲಿನಲ್ಲಿ ₹10 ಕೋಟಿ
  •  ಆಹಾರ ಸಂಸ್ಕರಣೆ ಹಾಗೂ ಕೊಯ್ಲೋತ್ತರ ನಿರ್ವಹಣೆ ಘಟಕಗಳಿಗೆ ನೀಡುವ ಶೇ 35ರ ಸಹಾಯಧನ ಶೇ 50ಕ್ಕೆ ಹೆಚ್ಚಳ. ₹50 ಕೋಟಿ ಅನುದಾನ
  •  ಕೊಪ್ಪಳ ಜಿಲ್ಲೆಯ ಸಿರಿವಾರ ಗ್ರಾಮದಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್
  •  ಅಡಿಕೆ ಬೆಳಗ್ಗೆ ಬಾಧಿಸುವ ಹಳದಿ ಎಲೆ ರೋಗದ ಕುರಿತ ಸಂಶೋಧನೆ ಹಾಗೂ ಪರಿಹಾರ ಬೆಳೆ ಪ್ರೋತ್ಸಾಹಿಸಲು ₹25 ಕೋಟಿ ಅನುದಾನ
  • ದ್ರಾಕ್ಷಿ ಕೃಷಿಯ ಉತ್ತೇಜನಕ್ಕಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿಯನ್ನು ಕರ್ನಾಟಕ ದ್ರಾಕ್ಷಿ ಹಾಗೂ ದ್ರಾಕ್ಷಾರಸ ಮಂಡಳಿಯನ್ನಾಗಿ ಪುನರ್‌ ರಚನೆ.
  •  ಬೆಂಗಳೂರಿನ ಓಕಳೀಪುರಂನಲ್ಲಿ ರೇಷ್ಮೆ ಇಲಾಖೆಯ  ಕಚೇರಿಗಳನ್ನು ಒಂದೇ ಸೂರಿನಡಿ ತರಲು ₹150 ಕೋಟಿ ವೆಚ್ಚದಲ್ಲಿ ರೇಷ್ಮೆ ಭವನ
  •  ರಾಮನಗರದಲ್ಲಿ ₹25 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ
  •  ಗೋದಾಮುಗಳಲ್ಲಿ ಕೃಷಿ ಉತ್ಪನ್ನಗಳ ಸಂಗ್ರಹಣ ಶುಲ್ಕದ ಶೇಕಡ 25 ರಷ್ಟು ಸಹಾಯಧನ. ಇದಕ್ಕಾಗಿ ₹25 ಕೋಟಿ ಅನುದಾನ
  • ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಹಾಗೂ ಟಿಎಪಿಸಿಎಂಎಸ್‌ಗಳಲ್ಲಿ ಸಂಗ್ರಹಿಸಿದ ಕೃಷಿ ಉತ್ಪನ್ನಗಳ ಮೇಲೆ ಶೇ 11ರ ದರದಲ್ಲಿ ವಿತರಿಸಿದ ಅಡಮಾನ ಸಾಲ ಸೌಲಭ್ಯಕ್ಕೆ 6 ತಿಂಗಳ ಅವಧಿಗೆ ಸರ್ಕಾರದಿಂದ ಶೇ 4ರ ಬಡ್ಡಿ ಸಹಾಯಧನ. ಇದಕ್ಕಾಗಿ ₹5 ಕೋಟಿ ಅನುದಾನ
  • ಗ್ರಾಮೀಣ ಭಾಗದ 5,500 ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣಕ್ಕೆ ₹198 ಕೋಟಿ ಅನುದಾನ
  • ಬೈಯಪ್ಪನಹಳ್ಳಿಯಲ್ಲಿ ₹50 ಕೋಟಿ ವೆಚ್ಚದ ಸುಸಜ್ಜಿತ ಹೂವಿನ ಮಾರುಕಟ್ಟೆ ನಿರ್ಮಾಣ

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top