Karnataka budget 2021: ಮಠ-ಸಾಂಸ್ಕೃತಿಕ ಕೇಂದ್ರಗಳಿಗೆ ಭರಪೂರ ಕೊಡುಗೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಶುಭ ಮುಹೂರ್ತದಲ್ಲಿ ಇಂದು ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಯಡಿಯೂರಪ್ಪ ಮಠ, ಮಂದಿರಗಳಿಗೆ ಭರಪೂರ ಕೊಡುಗೆ ನೀಡಿದ್ದಾರೆ

ಬಜೆಟ್​ ಮಂಡನೆಗೂ ಮೊದಲು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿಯೇ ವಿಧಾನಸೌಧಕ್ಕೆ ಬಂದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವರ್ಷವೂ ಮಠಗಳು, ಧಾರ್ಮಿಕ ಸಂಸ್ಥೆಗಳು ಮತ್ತು ಸಾಂಸ್ಕೃತಿಕ ಸಂಸ್ಥೆಗಳಿಗೆ ಅನುದಾನ ಘೋಷಿಸಿದ್ದಾರೆ.

ಬಜೆಟ್ ಆರಂಭವಾಗುತ್ತಿದ್ದಂತೆ ವಿಪಕ್ಷ ಕಾಂಗ್ರೆಸ್, ಅನೈತಿಕ ಸರ್ಕಾರದ ಬಜೆಟ್ ಮಂಡನೆಗೆ ಸಹಕಾರ ನೀಡಲ್ಲ ಎಂದು ಘೋಷಣೆ ಕೂಗಿ ಸಭಾ ತ್ಯಾಗ ಮಾಡಿತು‌.‌

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ₹ 50 ಕೋಟಿ, ವಿಜಯಪುರ ಜಿಲ್ಲೆ ಬಸನವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿರುವ ಜಗಜ್ಯೋತಿ ಬಸವಣ್ಣ ಜನ್ಮಸ್ಥಳ ಅಭಿವೃದ್ಧಿಗೆ ₹ 5 ಕೋಟಿ, ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ ₹ 10 ಕೋಟಿ ಅನುದಾನ ಘೋಷಿಸಲಾಗಿದೆ. ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣ ಕಾಮಗಾರಿಗೂ ಕರ್ನಾಟಕ ಸರ್ಕಾರ ₹ 10 ಕೋಟಿ ಅನುದಾನ ಘೋಷಿಸಿದ್ದಾರೆ.

ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್.ಎಲ್.ಬೈರಪ್ಪ ಅವರ ಪರ್ವ ನಾಟಕ ಪ್ರದರ್ಶನಕ್ಕೆ ₹ 1 ಕೋಟಿ ಅನುದಾನ ಘೋಷಿಸಲಾಗಿದೆ. ರಾಜ್ಯಾದ್ಯಂತ ರಂಗಾಯಣಗಳ ಮೂಲಕ ಪರ್ವ ನಾಟಕವನ್ನು ಪ್ರದರ್ಶಿಸಲಾಗುವುದು.

ಅಲ್ಪಸಂಖ್ಯಾತರಿಗೆ ಅನುದಾನ
ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೂ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುದಾನ ಘೋಷಿಸಿದ್ದಾರೆ. ಕ್ರಿಶ್ಚಿಯನ್ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ₹200 ಕೋಟಿ, ಅಲ್ಪಸಂಖ್ಯಾತ ಸಮುದಾಯಗಳಿಗಾಗಿ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು ₹ 1,500 ಕೋಟಿ ಮೊತ್ತವನ್ನು ಈ ಬಾರಿಯ ಬಜೆಟ್​ನಲ್ಲಿ ಮೀಸಲಿಡಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *