ಬೆಂಗಳೂರು: 2022-23ನೇ ಸಾಲಿನ ಬಜೆಟ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಕೃಷಿ ಹಾಗೂ ಪೂರಕ ಚಟುವಟಿಕೆಗಳಿಗೆ 33,700 ಕೋಟಿ ಅನುದಾನ ಮೀಸಲಿಟ್ಟಿದ್ದಾರೆ. ರೈತ ಶಕ್ತಿ ಎಂಬ ಹೊಸ ಯೋಜನೆಯನ್ನು ಸಿಎಂ ಘೋಷಣೆ ಮಾಡಿದ್ದು, ಈ ಯೋಜನೆಗೆ 600 ಕೋಟಿ ಅನುದಾನ ಮೀಸಲಿಟ್ಟಿದ್ದಾರೆ.
ಈ ಯೋಜನೆಯಡಿ ಪ್ರತಿ ಎಕರೆಗೆ 250 ರೂಪಾಯಿ ಡೀಸೆಲ್ ಸಹಾಯಧನ ನೀಡುವುದಾಗಿ ತಿಳಿಸಿದ್ದಾರೆ. ಇನ್ನು ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ 8,457 ಕೋಟಿ ಅನುದಾನ ಘೋಷಿಸಲಾಗಿದೆ. ಬೆಳಗಾವಿ ಅಥಣಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆ, ಕೃಷಿ ಜಮೀನು ಡ್ರೋನ್ ಸರ್ವೆಗೆ 287 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ. 33 ಲಕ್ಷ ರೈತರಿಗೆ ಕೃಷಿ ಸಾಲ ಸೌಲಭ್ಯ, ಬೆಳಗಾವಿ, ಬಳ್ಳಾರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆ, ರೈತರ ಆರೋಗ್ಯ ಸೇವೆಗಾಗಿ ಯಶಸ್ವಿನಿ ಯೋಜನೆ ಪರಿಷ್ಕರಣೆ, ,, ವೈದ್ಯಕೀಯ ಸೌಲಭ್ಯ ಕಲ್ಪಿಸಲು 300 ಕೋಟಿ ಅನುದಾನ.