ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಇಂದು ತಮ್ಮ ಮೊದಲ ಬಜೆಟ್ – 2022 ಮಂಡಿಸಲಿದ್ದಾರೆ. ಈ ಬಗ್ಗೆ ಸಿಎಂ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದೀಗೆ ಹಣಕಾಸು ಇಲಾಖೆಯ ಅಧಿಕಾರಿಗಳು ಬಜೆಟ್ ಪ್ರತಿಯನ್ನು ಸಿಎಂಗೆ ಹಸ್ತಾಂತರಿಸಿದರು.
ಇದಕ್ಕೂ ಮುನ್ನ ಸಿಎಂ ಶ್ರೀಕಂಠೇಶ್ವರ ದೇವಸ್ಥಾ, ಆಂಜನೇಯ ಸ್ವಾಮಿ ದೇವಾಲಯಕ್ಕೆ ತೆರಳಿ ವಿಷೇಶ ಪೂಜೆ ಸಲ್ಲಿಸಿದರು. ಸಮಸ್ತ ಕರ್ನಾಟಕದ ಜನತೆ ಹೆಸರಿನಲ್ಲಿ ಅರ್ಚನೆ ಮಾಡಿಸಿದ ಅವರು, ರಾಜ್ಯದ ಜನತೆಗೆ ಸುಖ, ಶಾಂತಿ, ನೆಮ್ಮದಿಯನ್ನು ಕರುಣಿಸಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದರು. ಈ ಬಳಿಕ ರೇಸ್ ಕೋರ್ಸ್ ನಿವಾಸಕ್ಕೆ ಹಿಂದಿರುಗಿದ್ದಾರೆ. ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಸ್ ಎನ್ ಪ್ರಸಾದ್, ಕಾರ್ಯದರ್ಶಿಗಳಾದ ಎಕ್ ರೂಪ್ ಕೌರ್, ಪಿ ಸಿ ಜಾಫರ್ ಅವರಿಂದ 2022-23ನೇ ಸಾಲಿನ ಬಜೆಟ್ ಪುಸ್ತಕವನ್ನು ಸಿಎಂಗೆ ಹಸ್ತಾಂತರಸಲಾಯಿತು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಸಿಸಿ ಪಾಟೀಲ್, ಬೈರತಿ ಬಸವರಾಜ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.