ದಾವಣಗೆರೆ; ಈ ಬಾರಿಯ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ, ಬಿಸಿಯೂಟ ತಯಾರಕರ ಹಾಗೂ ಆಶಾ ಕಾರ್ಯಕರ್ತೆಯರ ಗೌರವ ಧನದಲ್ಲಿ ರೂ.1000 ಹೆಚ್ಚಳದ ಘೋಷಣೆ ಮಾಡಲಾಗಿದೆ. ಆದರೆ ಈ ಕನಿಷ್ಠ ಹೆಚ್ಚಳ ಆ ಮಾತೆಯರ ಹೊಟ್ಟೆ ತುಂಬಿಸುವಲ್ಲಿ ಅಥವಾ ಗೌರವಯುತವಾದ ಜೀವನ ನಡೆಸಲು ಅನುಕೂಲ ಮಾಡುವುದರಲ್ಲಿ ವಿಫಲವಾಗಿದೆ. ಎಐಟಿಯುಸಿ ಸಂಘಟನೆ ಕನಿಷ್ಠ ವೇತನ ರೂ.31500/- ಜಾರಿಗೆ ತರಬೇಕು, ರೂ.5000/- ಪಿಂಚಣಿ ನೀಡಬೇಕು ಹಾಗೂ ಇವರನ್ನು ಸರಕಾರಿ ನೌಕರರೆಂದು ಪರಿಗಣಿಸಬೇಕೆಂದು ಹೋರಾಟ ಮಾಡಿತ್ತು. ಆದರೆ ಈ ನ್ಯಾಯಯುತವಾದ ಬೇಡಿಕೆಯನ್ನು ಈಡೇರಿಸದೇ ಕಾರ್ಮಿಕ ವರ್ಗಕ್ಕೆ ಅನ್ಯಾಯ ಮಾಡಲಾಗಿದೆ. ಆದ್ದರಿಂದ ನಮ್ಮ ಸಂಘಟನೆಯ ಹೋರಾಟ ಮುಂದುವರೆಯಲಿದೆ ಎಂದು ಎಐಟಿಯುಸಿ ಕಾರ್ಮಿಕ ಸಂಘಟನೆ ಜಿಲ್ಲಾಧ್ಯಕ್ಷ ಕೆ.ರಾಘವೇಂದ್ರ ನಾಯರಿ ಅಭಿಪ್ರಾಯಪಟ್ಟಿದ್ದಾರೆ.
ದಾವಣಗೆರೆ: ಕಾರ್ಮಿಕರ ಪಾಲಿಗೆ ನಿರಾಶಾದಾಯಕ ಬಜೆಟ್; ಕೆ.ರಾಘವೇಂದ್ರ ನಾಯರಿ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment