Connect with us

Dvgsuddi Kannada | online news portal | Kannada news online

ದಾವಣಗೆರೆ: ಕಾರ್ಮಿಕರ ಪಾಲಿಗೆ ನಿರಾಶಾದಾಯಕ ಬಜೆಟ್; ಕೆ.ರಾಘವೇಂದ್ರ ನಾಯರಿ

ದಾವಣಗೆರೆ

ದಾವಣಗೆರೆ: ಕಾರ್ಮಿಕರ ಪಾಲಿಗೆ ನಿರಾಶಾದಾಯಕ ಬಜೆಟ್; ಕೆ.ರಾಘವೇಂದ್ರ ನಾಯರಿ

ದಾವಣಗೆರೆ; ಈ ಬಾರಿಯ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ, ಬಿಸಿಯೂಟ ತಯಾರಕರ ಹಾಗೂ ಆಶಾ ಕಾರ್ಯಕರ್ತೆಯರ ಗೌರವ ಧನದಲ್ಲಿ ರೂ.1000 ಹೆಚ್ಚಳದ ಘೋಷಣೆ ಮಾಡಲಾಗಿದೆ. ಆದರೆ ಈ ಕನಿಷ್ಠ ಹೆಚ್ಚಳ ಆ ಮಾತೆಯರ ಹೊಟ್ಟೆ ತುಂಬಿಸುವಲ್ಲಿ ಅಥವಾ ಗೌರವಯುತವಾದ ಜೀವನ ನಡೆಸಲು ಅನುಕೂಲ ಮಾಡುವುದರಲ್ಲಿ ವಿಫಲವಾಗಿದೆ. ಎಐಟಿಯುಸಿ ಸಂಘಟನೆ ಕನಿಷ್ಠ ವೇತನ ರೂ.31500/- ಜಾರಿಗೆ ತರಬೇಕು, ರೂ.5000/- ಪಿಂಚಣಿ ನೀಡಬೇಕು ಹಾಗೂ ಇವರನ್ನು ಸರಕಾರಿ ನೌಕರರೆಂದು ಪರಿಗಣಿಸಬೇಕೆಂದು ಹೋರಾಟ ಮಾಡಿತ್ತು. ಆದರೆ ಈ ನ್ಯಾಯಯುತವಾದ ಬೇಡಿಕೆಯನ್ನು ಈಡೇರಿಸದೇ ಕಾರ್ಮಿಕ ವರ್ಗಕ್ಕೆ ಅನ್ಯಾಯ ಮಾಡಲಾಗಿದೆ. ಆದ್ದರಿಂದ ನಮ್ಮ ಸಂಘಟನೆಯ ಹೋರಾಟ ಮುಂದುವರೆಯಲಿದೆ ಎಂದು ಎಐಟಿಯುಸಿ ಕಾರ್ಮಿಕ ಸಂಘಟನೆ ಜಿಲ್ಲಾಧ್ಯಕ್ಷ ಕೆ.ರಾಘವೇಂದ್ರ ನಾಯರಿ ಅಭಿಪ್ರಾಯಪಟ್ಟಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top