ನವದೆಹಲಿ: ಭಾರತದ ಚುನಾವಣಾ ಆಯೋಗವು ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಗಳ ಉಪ ಚುನಾವಣೆ ದಿನಾಂಕ ಘೋಷಣೆ ಮಾಡಿದೆ. ಈ ಮೂರೂ ಕ್ಷೇತ್ರಗಳಲ್ಲಿ ನವೆಂಬರ್ 13 ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.
ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ, ಗೆದ್ದ ನಂತರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು.ಅದೇ ರೀತಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಶಿಗ್ಗಾವಿ ಕ್ಷೇತ್ರ ಹಾಗೂ ಇ. ತುಕಾರಾಂ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಈ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ.
ಬಸವರಾಜ್ ಬೊಮ್ಮಾಯಿ ಹಾವೇರಿ ಲೋಕಸಭಭೆ, ಹೆಚ್ ಡಿ ಕುಮಾರಸ್ವಾಮಿ ಮಂಡ್ಯ ಕ್ಲೋಕಸಭೆಗೆ ಹಾಗೂ ಇ. ತುಕಾರಾಂ ಬಳ್ಳಾರಿ ಲೋಕಸಭೆ ಪ್ರವೇಶಿಸಿದ್ದಾರೆ.
ಕೇರಳದ 47 ವಿಧಾನಸಭಾ ಸ್ಥಾನ ಹಾಗೂ ಒಂದು ಲೋಕಸಭಾ ಸ್ಥಾನಕ್ಕೆ ನವೆಂಬರ್ 13 ರಂದು ಮತದಾನ ನಡೆಯಲಿದೆ. ಉತ್ತರಾಖಂಡದ ಒಂದು ವಿಧಾನಸಭಾ ಸ್ಥಾನ ಹಾಗೂ ಮಹಾರಾಷ್ಟ್ರದ ಒಂದು ಲೋಕಸಭಾ ಸ್ಥಾನಕ್ಕೆ ನವೆಂಬರ್ 20 ರಂದು ಮತದಾನ ನಡೆಯಲಿದೆ. ಎಲ್ಲಾ ಚುನಾವಣೆಗಳ ಫಲಿತಾಂಶ ನವೆಂಬರ್ 23 ರಂದು ಪ್ರಕಟವಾಗಲಿದೆ.




