ಬೆಂಗಳೂರು : ಸಿಎಂ ಯಡಿಯೂರಪ್ಪ ಈಗಾಗಲೇ ಎರಡು ಬಾರಿ ಖಾತೆ ಅದಲು-ಬದಲು ಮಾಡಿದ್ದರು. ಇದೀಗ ಅಸಮಾನಿತರನ್ನು ತಣ್ಣಗಾಗಿಸಲು ಸಿಎಂ ಯಡಿಯೂರಪ್ಪ, ಈಗ ಮತ್ತೆ ಖಾತೆ ಅದಲು-ಬದಲು ಮಾಡಿದ್ದಾರೆ. ಕೋವಿಡ್ ನಿಯಂತ್ರಣ ಹಿನ್ನಲೆ ಸಚಿವ ಡಾ.ಕೆ.ಸುಧಾಕರ್ ಅವರಿಂದ ಹಿಂಪಡೆದು, ಸಚಿವ ಮಾಧುಸ್ವಾಮಿಗೆ ನೀಡಲಾಗಿದ್ದ ವೈದ್ಯಕೀಯ ಶಿಕ್ಷಣ ಖಾತೆಯನ್ನು ಮತ್ತೆ, ಸುಧಾಕರ್ ಅವರಿಗೆ ನೀಡಿದ್ದಾರೆ.
ಇದರೊಂದಿಗೆ ಸಚಿವ ಸುಧಾಕರ್ ಗೆ ಆರೋಗ್ಯ ಖಾತೆ ಜೊತೆ ಪುನಃ ವೈದ್ಯಕೀಯ ಶಿಕ್ಷಣ ಜವಾಬ್ದಾರಿ ನೀಡಿದ್ದಾರೆ. ಜೊತೆಗೆ ಸಚಿವ ಆನಂದ್ ಸಿಂಗ್ ಅವರಿಗೆ ಸಿಎಂ ಬಳಿಯಲ್ಲಿದ್ದಂತ ಮೂಲ ಸೌಕರ್ಯ ಖಾತೆಯನ್ನು ಹೆಚ್ಚುವರಿಯಾಗಿ ನೀಡಿದ್ದಾರೆ. ಸಚಿವ ಮಾಧುಸ್ವಾಮಿ ಅವರಿಗೆ ಪ್ರವಾಸೋದ್ಯಮ ಖಾತೆಯ ಜೊತೆಗೆ ಪರಿಸರ ಖಾತೆ ನೀಡಲಾಗಿದೆ.
ಸಚಿವ ಜೆಸಿ ಮಾಧುಸ್ವಾಮಿ ಅವರ ಬಳಿ ಇದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ನೀಡಿ, ಮಾಧುಸ್ವಾಮಿಗೆ ವೈದ್ಯಕೀಯ ಶಿಕ್ಷಣ ಖಾತೆ ನೀಡಲಾಗಿತ್ತು. ಆದರೆ ನಾನು ಗ್ರಾಮೀಣ ಭಾಗದಿಂದ ಬಂದವನು, ವೈದ್ಯಕೀಯ ಶಿಕ್ಷಣ ಖಾತೆಯಿಂದ ಏನ್ ಜನರ ಕೆಲಸ ಮಾಡಲಿ ಎಂಬುದಾಗಿ ಬೇಸರ ವ್ಯಕ್ತ ಪಡಿಸಿದ್ದರು.
ಇತ್ತ ಆನಂದ್ ಸಿಂಗ್ ಅವರ ಖಾತೆಯನ್ನು ಕೂಡ ಅದಲು ಬದಲು ಮಾಡಲಾಗಿದೆ. ಅವರಿಗೆ ಸಿಎಂ ಯಡಿಯೂರಪ್ಪ ಬಳಿ ಇದ್ದ ಮೂಲ ಸೌಕರ್ಯ ಖಾತೆ ಜೊತೆಗೆ ಹಜ್ ಮತ್ತು ವಕ್ಫ್ ಖಾತೆ ನೀಡಲಾಗಿದೆ. ಅಲ್ಲದೇ ಸಚಿವ ಮಾಧುಸ್ವಾಮಿಯವರಿಗೆ ಪ್ರವಾಸೋದ್ಯಮ ಖಾತೆಯ ಜೊತೆಗೆ ಪರಿಸರ ಖಾತೆಯ ಹೊಣೆಗಾರಿಕೆ ನೀಡಲಾಗಿದೆ. ಈ ಮೊದಲು ಪರಿಸರ ಖಾತೆ ಸಚಿವ ಆನಂದ್ ಸಿಂಗ್ ಬಳಿಯಲ್ಲಿತ್ತು. ಈ ಮೂಲಕ ಡಾ.ಕೆ.ಸುಧಾಕರ್, ಜೆಸಿ ಮಾಧುಸ್ವಾಮಿ ಹಾಗೂ ಆನಂದ್ ಸಿಂಗ್ ಖಾತೆಗಳನ್ನು ಬದಲಾವಣೆ ಮಾಡಲಾಗಿದೆ. ಖಾತೆ ಅದಲು-ಬದಲು ಪಟ್ಟಿಗೆ ರಾಜ್ಯಪಾಲರು ಕೂಡ ಅಂಕಿತ ಸೂಚಿಸಿದ್ದಾರೆ.