ಶಿವಮೊಗ್ಗ: ಕಾರು ಡಿಕ್ಕಿ ಹೊಡೆದು 7ಎಮ್ಮೆಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ನಿನ್ನೆ ತಡ ರಾತ್ರಿ ಈ ಘಟನೆ ನಡೆದಿದೆ. ಗಾಡಿಕೊಪ್ಪದ ತುಂಗಾ ನಾಲೆ ಬಳಿ ಆಘಾತ ಸಂಭವಿಸಿದೆ. ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ ಕಾರು ಎಮ್ಮೆಗಳಿಗೆ ಡಿಕ್ಕಿ ಹೊಡೆದಿದೆ. ರಸ್ತೆ ಮಧ್ಯೆ ಎಮ್ಮೆಗಳು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಶಿವಮೊಗ್ಗ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.