ವಿಜಯಪುರ: ಹುಬ್ಬಳ್ಳಿಯಲ್ಲಿ ನಡೆಯುತ್ತಿದ್ದ ಕಬ್ಬಡಿ ಕ್ರೀಡಾ ಕೂಟದಲ್ಲಿ ಭಾಗವಹಿಸಲು ಆಟಗಾರರಿದ್ದ ಕಾರು, ಲಾರಿಗೆ ಡಿಕ್ಕಿಯಾಗಿದೆ. ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲಿಯೇ ಇಬ್ಬರು ಕ್ರೀಡಾ ಪಟುಗಳು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ದಾವಣಗೆರೆ: 4,912 ಅಕ್ರಮ ಬಿಪಿಎಲ್ ಕಾರ್ಡ್ ರದ್ದು; RTO ಇಲಾಖೆಯಿಂದ ಕಾರು ಖರೀದಿದಾರರ ಮಾಹಿತಿ ಸಂಗ್ರಹ..!
ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಗಾಳ ಕ್ರಾಸ್ ಬಳಿ ಈ ಘಟನೆ ನಡೆದಿದೆ. 10 ಕಟಬ್ಬಡಿ ಆಟಗಾರು ಹುಬ್ಬಳ್ಳಿಯಲ್ಲಿ ನಡೆಯುತ್ತಿದ್ದಂತ ಕಬಡ್ಡಿ ಕ್ರೀಡಾಕೂಟಕ್ಕೆ ಭಾಗವಹಿಸಲು ಟವೇರಾ ಕಾರನಲ್ಲಿ ತೆರಳುತ್ತಿದ್ದರು. ವೇಗವಾಗಿ ಚಲಿಸುತ್ತಿದ್ದಾಗ ಎದುರಿಗೆ ಬಂದ ಲಾರಿಗೆ ಡಿಕ್ಕಿಯಾಗಿದೆ. ಇದರಿಂದಾಗಿ ಇಬ್ಬರು ಕ್ರೀಡಾಪಟುಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ 8 ಜನರಲ್ಲಿ ಮೂವರು ಕ್ರೀಡಾಪಟುಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ಕಬಡ್ಡಿ ಕ್ರೀಡಾಪಟುಗಳನ್ನು ಸೊಹೇಲ್ ಮತ್ತು ಮಹಾದೇವ ಎಂದು ಗುರುತಿಸಲಾಗಿದೆ. ಗಾಯಗೊಂಡ ಕಬಡ್ಡಿ ಕ್ರೀಡಾಪಟುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.