Connect with us

Dvgsuddi Kannada | online news portal | Kannada news online

ಭೀಕರ ರಸ್ತೆ ಅಪಘಾತ: ನಾಲ್ವರ ಸಾವು, 11ಜನರಿಗೆ ಗಂಭೀರ ಗಾಯ

ಪ್ರಮುಖ ಸುದ್ದಿ

ಭೀಕರ ರಸ್ತೆ ಅಪಘಾತ: ನಾಲ್ವರ ಸಾವು, 11ಜನರಿಗೆ ಗಂಭೀರ ಗಾಯ

ಹಾಸನ: ಟಾಟಾ ಸುಮೋಗೆ ಹಿಂದಿನಿಂದ ಬಂದ ಕ್ವಾಲಿಸ್ ಕಾರು ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. ನಾಲ್ವರು ಮಹಿಳೆಯರು ಸೇರಿದಂತೆ ಒಟ್ಟು 11 ಜನರಿಗೆ ಗಂಭೀರ ಗಾಯಗೊಂಡಿದ್ದಾರೆ.

ಹಾಸನ ಹೊರವಲಯದ ಕೆಂಚಟ್ಟಹಳ್ಳಿಯ ಬಳಿ ಘಟನೆ ನಡೆದಿದೆ.ಟಾಟಾ ಸುಮೋಗೆ ಹಿಂದಿನಿಂದ ಬಂದ ಕ್ವಾಲಿಸ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಕ್ವಾಲಿಸ್‌ನಲ್ಲಿದ್ದ ಕೆಜಿಎಫ್ ಮೂಲದ ಪ್ರದೀಪ್ ಕುಮಾರ್, ಪುನೀತ್, ನವೀನ್ ಗುಡ್ಡು ಮೃತಪಟ್ಟಿದ್ದಾರೆ. ಒಬ್ಬರ ಸ್ಥಿತಿ ತೀರಾ ಗಂಭೀರವಾಗಿದೆ. ಗಾಯಾಳುಗಳಿಗೆ ಹಾಸನ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಡುಪಿಗೆ ಮದುವೆಗೆ ತೆರಳ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಹಾಸನ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});