ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಪತ್ರದ ಮೂಲಕ ಮತ್ತೊಂದು ದೂರು ನೀಡಿದ್ದಾಳೆ.
ತಮ್ಮ ಪರ ವಕೀಲರಿಗೆ ಹಣದ ಆಮಿಷವೊಡ್ಡಿ ಒತ್ತಡ ಹಾಕಿದ್ದಾರೆ. ಇದಲ್ಲದೆ ಸಾಕ್ಷ್ಯ ನಾಶಕ್ಕೂ ಯತ್ನಿಸಿದ್ದಾರೆ. ಕೂಡಲೇ ಆರೋಪಿ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ಧಾಳೆ. ರಮೇಶ್ ಜಾರಕಿಹೊಳಿ ಪುತ್ರ ಸ್ನೇಹಿತನ ಮೂಲಕ ವಕೀಲರಿಗೆ ಕರೆ ಮಾಡಿ ಹಣದ ಆಮಿಷವೊಡ್ಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ. .



