ಕಲಬುರಗಿ: ಸಿಇಟಿ ಪರೀಕ್ಷೆಯಲ್ಲಿ ಅಧಿಸೂಚನೆ ಹೊರಡಿಸಿದಷ್ಟು ಶಿಕ್ಷಕರು ಪಾಸಾಗುತ್ತಿಲ್ಲ. ಹೀಗಾಗಿ ವರ್ಷಕ್ಕೆ ಎರಡು ಬಾರಿ ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಸಿಇಟಿ ಪರೀಕ್ಷೆ ನಡೆಸಿದಾಗ ಕೇವಲ 3 ಸಾವಿರ ಶಿಕ್ಷಕರು ಮಾತ್ರ ಪಾಸ್ ಆಗಿದ್ದಾರೆ. ಆದರೆ, ಇಲಾಖೆಗೆ ಹೆಚ್ಚಿನ ಶಿಕ್ಷಕರ ಅಗತ್ಯವಿತ್ತು. ಹೀಗಾಗಿ ವರ್ಷದಲ್ಲಿ ಎರಡು ಬಾರಿ ಪರೀಕ್ಷೆ ನಡೆಸಲಾಗುವುದು. ಶೀಘ್ರವೇ 5 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ತಿಳಿಸಿದರು. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಕರ ಹುದ್ದೆ ನೇಮಕ ಮಾಡಿಕೊಳ್ಳುವ ಬಗ್ಗೆ ಆಸಕ್ತಿ ತೋರಿದ್ದಾರೆ ಎಂದರು.



