Connect with us

Dvgsuddi Kannada | online news portal | Kannada news online

ಶಿಕ್ಷಕರ ನೇಮಕಕ್ಕೆ ವರ್ಷದಲ್ಲಿ ಎರಡು ಬಾರಿ ಸಿಇಟಿ: ಶಿಕ್ಷಣ ಸಚಿವ ನಾಗೇಶ್

ಪ್ರಮುಖ ಸುದ್ದಿ

ಶಿಕ್ಷಕರ ನೇಮಕಕ್ಕೆ ವರ್ಷದಲ್ಲಿ ಎರಡು ಬಾರಿ ಸಿಇಟಿ: ಶಿಕ್ಷಣ ಸಚಿವ ನಾಗೇಶ್

ಕಲಬುರಗಿ ಸಿಇಟಿ ಪರೀಕ್ಷೆಯಲ್ಲಿ ಅಧಿಸೂಚನೆ ಹೊರಡಿಸಿದಷ್ಟು  ಶಿಕ್ಷಕರು ಪಾಸಾಗುತ್ತಿಲ್ಲ. ಹೀಗಾಗಿ ವರ್ಷಕ್ಕೆ ಎರಡು ಬಾರಿ ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ‌ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಸಿಇಟಿ ಪರೀಕ್ಷೆ ‌ನಡೆಸಿದಾಗ ಕೇವಲ 3 ಸಾವಿರ ಶಿಕ್ಷಕರು ಮಾತ್ರ ಪಾಸ್ ಆಗಿದ್ದಾರೆ.  ಆದರೆ, ಇಲಾಖೆಗೆ ಹೆಚ್ಚಿನ ಶಿಕ್ಷಕರ ಅಗತ್ಯವಿತ್ತು. ಹೀಗಾಗಿ  ವರ್ಷದಲ್ಲಿ ಎರಡು ಬಾರಿ ಪರೀಕ್ಷೆ ನಡೆಸಲಾಗುವುದು. ಶೀಘ್ರವೇ 5 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ತಿಳಿಸಿದರು.  ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಕರ ಹುದ್ದೆ ನೇಮಕ ಮಾಡಿಕೊಳ್ಳುವ ಬಗ್ಗೆ ಆಸಕ್ತಿ ತೋರಿದ್ದಾರೆ ಎಂದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top