ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ರಾಜ್ಯ ಬಜೆಟ್-2025-26 ( Karnataka Budget) ಮಂಡಿಸುತ್ತಿದ್ದು, ಇಲಾಖೆವಾರು ಅನುದಾನ ಹಂಚಿಕೆ ಮಾಡಿದ್ದಾರೆ. ರೈತರ ಜಮೀನುಗಳಿಗೆ ಇರುವ ದಾರಿಗಳ ಅಭಿವೃದ್ಧಿಗೆ ಸಿಎಂ, ಹೊಸ ಯೋಜನೆ ಘೋಷಣೆ ಮಾಡಿದ್ದಾರೆ. ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲು ಕೃಷಿ ಪಥ ಯೋಜನ ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
4 ಲಕ್ಷ ಕೋಟಿ ದಾಟಿದ ರಾಜ್ಯ ಬಜೆಟ್; ಯಾವ ಇಲಾಖೆಗೆ ಎಷ್ಟು ಅನುದಾನ..?
ಗ್ರಾಮೀಣ ಪ್ರದೇಶಗಳಲ್ಲಿ ಹಾದುಹೋಗುವ ರಾಜ್ಯ ಮತ್ತು ಜಿಲ್ಲಾ ರಸ್ತೆಗಳ 5,000 ಕಿ.ಮೀ. ಬದಿಗಳಲ್ಲಿ ಸಸಿಗಳನ್ನು ಬೆಳೆಸಿ ‘ಹಸಿರು ಪಥ ‘ಗಳನ್ನು ನಿರ್ಮಾಣ ಮಾಡಲಾಗುವುದು. ರೈತರ ಜಮೀನುಗಳಲ್ಲಿ ಅಂತರ್ಜಲ ಹೆಚ್ಚಳ ಹಾಗೂ ಮಣ್ಣಿನ ಸಂರಕ್ಷಣೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ‘ಕೃಷಿ ಕವಚ’ ಕಾರ್ಯಕ್ರಮ ರೂಪಿಸಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಒಟ್ಟು 50,000 ಹೆಕ್ಟೇರ್ ಬದು ನಿರ್ಮಾಣ ಮಾಡಲಾಗುವುದು.
ಮುಸ್ಲಿಂ ಸಮುದಾಯಕ್ಕೆ ಬಂಪರ್ ಕೊಡುಗೆ; ಹಲಾಲ್ ಬಜೆಟ್ ಎಂದು ಬಿಜೆಪಿ ಕಿಡಿ
ತ್ಯಾಜ್ಯ ನೀರನ್ನು ನಿರ್ವಹಣೆ ಮಾಡಲು 500 ಗ್ರಾಮಗಳಲ್ಲಿ ಬೂದು ನೀರು ನಿರ್ವಹಣಾ ನಿರ್ಮಿಸಲಾಗುವುದು.ಗ್ರಾಮೀಣ ಪ್ರದೇಶದ ಸ್ವ-ಸಹಾಯ ಪಾಲ್ಗೊಳ್ಳುವಿಕೆಯೊಂದಿಗೆ ಮಿಶ್ರ ಬೆಳೆ ಪದ್ಧತಿಯಲ್ಲಿ ಸಂಬಾರ ಪದಾರ್ಥಗಳು ಹಾಗೂ ಹಣ್ಣಿನ ಬೆಳೆಗಳನ್ನು ಒಟ್ಟು 5,000 ಎಕರೆ ಪ್ರದೇಶದಲ್ಲಿ ಬೆಳೆಸಲಾಗುವುದು ಎಂದಿದ್ದಾರೆ.