ಚಿತ್ರದುರ್ಗ: ಭಾರತೀಯ ಸಶಸ್ತ್ರ ಪಡೆಗಳಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದಾವಣಗೆರೆ, ಚಿತ್ರದುರ್ಗದ 150 ಯುವಕರಿಗೆ 1 ಕೋಟಿ ರೂ. ವಂಚಿಸಿದ್ದ ಆರೋಪಿಯನ್ನು ಬಂಧಿಸಲಾಗಿದೆ.
ಹುಬ್ಬಳ್ಳಿ ಮೂಲದ ಶಿವರಾಜ್ ವಟಗಲ್ (40) ಬಂಧಿತ ಆರೋಪಿ. ಶಿವರಾಜ್ ವಟಗಲ್ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದೇನೆ ಎಂದು ಹೇಳಿ ಯುವಕರನ್ನು ನಂಬಿಸಸಿ ವಂಚನೆ ಮಾಡುತ್ತಿದ್ದನು.ಯುವಕರನ್ನು ನಂಬಿಸಲು ನಕಲಿ ದಾಖಲೆ ಸೃಷ್ಟಿಸಿತ್ತಿದ್ದನು. ಭಾರತೀಯ ಸೇನೆ, ವಾಯುಸೇನೆ ಮತ್ತು ನೌಕಾಪಡೆಯಲ್ಲಿ ಉದ್ಯೋಗ ಕೊಡಿಸುವುದಾಗಿ 150 ಯುವಕರಿಗೆ 1 ಕೋಟಿ ರೂ. ವಂಚಿಸಿದ್ದನು. ವಂಚನೆಗೆ ಒಳಗಾದ ಪ್ರಕಾಶ್ (31) ಎಂಬುವರು ಚಿತ್ರದುರ್ಗದ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪೊಲೀಸರು ಮತ್ತು ಮಿಲಿಟರಿ ಗುಪ್ತಚರ ಜಂಟಿಯಾಗಿ ಕಾರ್ಯಾಚರಣೆಗೆ ಇಳಿದಿತ್ತು. ಅಕ್ಟೋಬರ್ 20 ರಂದು ಮಿಲಿಟರಿ ಗುಪ್ತಚರ, ಬೆಂಗಳೂರು ಮತ್ತು ಚಿತ್ರದುರ್ಗ ಜಿಲ್ಲೆಯ ಶ್ರೀರಾಂಪುರ ಪೊಲೀಸ್ ತಂಡವು ಜಂಟಿ ಕಾರ್ಯಾಚರಣೆ ನಡೆಸಿ ಚಿತ್ರದುರ್ಗದಲ್ಲಿ ವಂಚಕ ಶಿವರಾಜ್ ಮತ್ತು ಆತನ ಸಂಗಾತಿ ಭೀಮವ್ವರನ್ನು ಬಂಧಿಸಿದ್ದಾರೆ. ದಾವಣಗೆರೆ, ಚಿತ್ರದುರ್ಗ ಸೇರಿ ಉತ್ತರ ಕರ್ನಾಟಕದ ಹಲವು ಜಿಲ್ಲೆಯಲ್ಲಿ ವಂಚನೆ ನಡೆಸಿದ್ದಾರೆ.
ಈ ಬಗ್ಗೆ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಂಚಕ ಶಿವರಾಜ್ ನಕಲಿ ನಕಲಿ ಗುರುತಿನ ಚೀಟಿಗಳು ಮತ್ತು ಸೇನಾ ನೇಮಕಾತಿ ಸಂಬಂಧಿತ ದಾಖಲೆಗಳನ್ನು ವಶಪಡೆಯಲಾಗಿದೆ.



