ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಗಾಂಧಿನಗರದಲ್ಲಿರುವ ಇತಿಹಾಸ ಪ್ರಸಿದ್ಧ ಅಣ್ಣಮ್ಮ ದೇವಸ್ಥಾನಕ್ಕೆ ಸಿಎಂ ಯಡಿಯೂರಪ್ಪ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳ ಸುದ್ದಿಗಾರರೊಂದಿಗೆ ಮಾತನಾಡಿ, ಸೋಂಕು ಹೆಚ್ಚಳದಿಂದ ರಾಜ್ಯದಲ್ಲಿ ಲಾಕ್ ಡೌನ್ ಅನಿವಾರ್ಯವಾಗಿದೆ. ಕೊರೊನಾದಿಂದ ಮುಕ್ತವಾಗಿ, ದೇಶದಲ್ಲಿ ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಅಣ್ಣಮ್ಮ ದೇವಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದಿದರು.
ನಾನು ಈಗಲೂ ಜನತೆಯಲ್ಲಿ ಮನವಿ ಮಾಡಿಕೊಳ್ಳುವುದೆನದರೆ, ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಜರ್ ಬಳಕೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಲಾಕ್ ಡೌನ್ ಬಗ್ಗೆ ಅಧಿಕಾರಿಗಳು, ತಜ್ಞರು ಹಾಗೂ ಸಚಿವರ ಜೊತೆ ಮಾತುಕತೆ ನಡೆಸಲಾಗುವುದು. ಅಂತಿಮವಾಗಿ ಏನು ನಿರ್ಧಾರ ತೆಗೆದುಕೊಳ್ಳಬೇಕು ಎಂಬುದನ್ನು ನಿರ್ಧರಿಸುತ್ತೇವೆ. ದಿನೇ ದಿನೇ ಪ್ರಕರಣಗಳು ಹೆಚ್ಚಾಗುತ್ತಿವೆ.ಹೀಗಾಗಿ ಇಂದು ಮತ್ತೊಂದು ಮಹತ್ವದ ಸಭೆ ನಡೆಸಲಾಗುವುದು ಎಂದರು.



