Connect with us

Dvgsuddi Kannada | online news portal | Kannada news online

ಸಿಎಂಗೆ ಸಾರ್ವಜನಿಕರು ದೂರು ಸಲ್ಲಿಸಲು ಈ ಮೇಲ್ ಐಡಿ ಬಳಸಿ

ಪ್ರಮುಖ ಸುದ್ದಿ

ಸಿಎಂಗೆ ಸಾರ್ವಜನಿಕರು ದೂರು ಸಲ್ಲಿಸಲು ಈ ಮೇಲ್ ಐಡಿ ಬಳಸಿ

ಬೆಂಗಳೂರು: ಮುಖ್ಯಮಂತ್ರಿ ಕಚೇರಿಗೆ ಸಾರ್ವಜನಿಕರು ದೂರು ಸಲ್ಲಿಕೆ ಹಾಗೂ ಸಂವಹನಕ್ಕಾಗಿ 2021ರ ಜನವರಿ ಒಂದನೇ ದಿನಾಂಕದಿಂದ cm.kar@nic.in ಇ-ಮೇಲ್ ಐಡಿಯನ್ನು ಮಾತ್ರ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ 2020ರ ಆಗಸ್ಟ್ ತಿಂಗಳಿನಿಂದ ಇ-ಮೇಲ್ ಮೂಲಕ ಸ್ವೀಕೃತವಾಗುವ ದೂರುಗಳನ್ನು  ಇ-ಆಫೀಸ್ ನಲ್ಲಿಯೇ ನಿರ್ವಹಿಸಲಾಗುತ್ತಿದೆ. ಪ್ರಸ್ತುತ ಮುಖ್ಯಮಂತ್ರಿಗಳ ಸಚಿವಾಲಯವು 3 ಸಕ್ರಿಯ ಇ-ಮೇಲ್ ವಿಳಾಸಗಳನ್ನು ಹೊಂದಿದ್ದು, ಇದರಿಂದ ಅಹವಾಲು ಪುನರಾವರ್ತನೆಯಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಅಹವಾಲು ಸಲ್ಲಿಕೆ ಮತ್ತು ನಿರ್ವಹಣೆಯನ್ನು ಸರಳಗೊಳಿಸಲು ಏಕ ವಿಳಾಸವನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ. ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸಿ, ಮುಂದಿನ ದಿನಗಳಲ್ಲಿ ತಮ್ಮ ಅಹವಾಲು ಮತ್ತು ಇತರ ಸಂವಹನವನ್ನು cm.kar@nic.in ಮೇಲ್ ಐಡಿ ಮೂಲಕವೇ ಮಾಡುವಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top