ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಜಾರಿಗೆ ತಂದಿರುವ ಕರ್ಫ್ಯೂ ಮತ್ತು ಮಾರ್ಗ ಸೂಚಿ ಪಾಲಿಸಿದವರಿಗೆ ಯಾವುದೇ ಮುಲಾಜಿಲ್ಲದೆ ಕಟ್ಟುನಿಟ್ಟಿನ ಕ್ರಮ ತನ್ನಿ ಎಂದು ಸಿಎಂ ಯಡಿಯೂರಪ್ಪ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಜಿಲ್ಲಾಡಳಿತಗಳ ಜೊತೆ ವಿಡಿಯೋಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಿಎ, ಕೊರೊನಾ ಎರಡನೇ ಅಲೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮೇ 12ರವರೆಗೆ ಕಠಿಣ ನಿಬಂಧನೆಗಳನ್ನು ಜಾರಿಗೆ ತಂದಿದೆ. ಈ ನಿಯಮಗಳನ್ನು ಆಯಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸರು ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು.
ಜನರಿಗೆ ತೊಂದರೆಯಾಗದಂತೆ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ 10 ಗಂಟೆಯವರೆಗೆ ನಿಗದಿ ಮಾಡಲಾಗಿದೆ. 10 ಗಂಟೆಯ ಬಳಿಕ ಯಾರೂ ಮನೆಯಿಂದ ಹೊರಬರುವಂತಿಲ್ಲ. ಅಗತ್ಯ ವಸ್ತುಗಳ ಖರೀದಿ ವೇಳೆ ಮಾಸ್ಕ್, ದೈಹಿಕ ಅಂತರ ಕಡ್ಡಾಯವಾಗಿದೆ. ಅನಗತ್ಯವಾಗಿ ಓಡಾಟ ನಡೆಸುವವರ ವಿರುದ್ಧ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. 14 ದಿನಗಳಲ್ಲಿ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗಬೇಕು ಎಂದು ಸೂಚನೆ ನೀಡಿದ್ದಾರೆ.