ಡಿವಿಜಿ ಸುದ್ದಿ, ಚಿಕ್ಕಮಗಳೂರು: ನಿಗೂಢವಾಗಿ ಸಾವನ್ನಪ್ಪಿದ ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಹೆಗ್ಡೆ ಅವರ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮಾಳವಿಕಾ ಸಿದ್ಧಾರ್ಥ್ ಅವರು ಚೆಕ್ ಬೌನ್ಸ್ ಕೇಸ್ ನಲ್ಲಿ ಬಂಧನ ಭೀತಿ ಎದುರಾಗಿದೆ.
ಚೆಕ್‌ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳವಿಕಾ ವಿರುದ್ಧ ಕೇಸ್ ದಾಖಲಾಗಿದ್ದು, ಸ್ಥಳೀಯ ಕೋರ್ಟ್ ಇವರಿಗೆ ವಾರೆಂಟ್ ಜಾರಿ ಮಾಡಿದೆ. ಹೀಗಾಗಿ ಮಾಳವಿಕಾ ಸಿದ್ಧಾರ್ಥ್ ಬಂಧನದ ಭಯ ಉಂಟಾಗಿದೆ.
ಈ ಪ್ರಕಣದಲ್ಲಿ ಮಾಳವಿಕಾ ಸಿದ್ಧಾರ್ಥ್ ಸೇರಿದಂತೆ ಎಂಟು ಜನರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಕಾಫಿ ಬೆಳೆಗಾರ ನಂದೀಶ್ ಕೆ. ಎಂಬುವವರು ದಾಖಲಿಸಿರುವ ಚೆಕ್‌ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಜೆಎಂಎಫ್‌ಸಿ ಕೋರ್ಟ್ ಈ ಆದೇಶ ಹೊರಡಿಸಿದೆ.
ಸಿದ್ಧಾರ್ಥ್ ಒಡೆತನದ ಎಬಿಸಿ ಸಂಸ್ಥೆಗೆ ಕಾಫಿ ಬೆಳೆಯನ್ನು ನೀಡಿದ್ದ ಸುಮಾರು 300ಕ್ಕೂ ಹೆಚ್ಚು ಬೆಳೆಗಾರರಿಗೆ ಸಂಸ್ಥೆಯು ಹಣವನ್ನು ಪಾವತಿಸಿರಲಿಲ್ಲ. 100 ಕೋಟಿಗೂ ಅಧಿಕ ಹಣವನ್ನು ಬೆಳಗೆಗಾರರಿಗೆ ನೀಡದೇ ಬಾಕಿ ಉಳಿಸಿಕೊಂಡಿದೆ.



