ಬೆಂಗಳೂರು: ರಾಜ್ಯದ ಎಲ್ಲಾ ಕೋಚಿಂಗ್ ಸೆಂಟರ್‌ಗಳು 25 ಸಾವಿರ ಶುಲ್ಕದೊಂದಿಗೆ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಮೈಸೂರು, ವಿಜಯಪುರ, ದಾವಣಗೆರೆ, ಬಳ್ಳಾರಿ ಸೇರಿದಂತೆ ರಾಜ್ಯಾದ್ಯಂತ ಎಲ್ಲೆಡೆ ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ಆಡಳಿತ ಸೇವೆ (ಐಎಎಸ್) ಹಾಗೂ ಕರ್ನಾಟಕ ಆಡಳಿತ ಸೇವೆ (ಕೆಎಎಸ್) ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರಗಳು ಕಡ್ಡಾಯವಾಗಿ ಮುಂದಿನ 15 ದಿನದೊಳಗೆ ಸರ್ಕಾರಕ್ಕೆ ನೋಂದಣಿ ಮಾಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಶಿಕ್ಷಣ ಇಲಾಖೆಯಿಂದ ಇಂತಹ ತರಬೇತಿ ಕೇಂದ್ರಗಳನ್ನು ರದ್ದುಗೊಳಿಸಲಾಗುವುದು ಎಂದು ಶಿಕ್ಷಣ ಇಲಾಖೆ ಆಯುಕ್ತ ಜಗದೀಶ್ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಐಎಎಸ್ , ಕೆಎಎಸ್ ಕೋಚಿಂಗ್ ಸೆಂಟರ್‌ಗಳು ಕಡ್ಡಾಯವಾಗಿ ಸರ್ಕಾರಕ್ಕೆ ನೋಂದಣಿ ಮಾಡಿಸಿಕೊಳ್ಳಬೇಕು. ಪ್ರಸ್ತುತ ರಾಜ್ಯದಲ್ಲಿ ನೂರಾರು ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳು, ಸೊಸೈಟಿಗಳು, ಟ್ರಸ್ಟ್‌ಗಳು ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಐಎಎಸ್, ಐಪಿಎಸ್, ಐಎಫ್ ಎಸ್, ಕೆಎಎಸ್, ಭಾಷಾ ಕೋಚಿಂಗ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ನೀಡುವ ಸಂಸ್ಥೆಗಳು ಸಾಕಷ್ಟು ಪ್ರಮಾಣದಲ್ಲಿ ತೆಲೆತ್ತುತ್ತಿವೆ.
ಇನ್ನು ಎಲ್ಲ ಕೋಚಿಂಗ್ ಸೆಂಟರ್‌ಗಳು ಕೂಡ ಕಾಲೇಜು ಶಿಕ್ಷಣ ಇಲಾಖೆಗೆ 25 ಸಾವಿರ ರೂ.ಶುಲ್ಕ ಕಟ್ಟಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು. ಈ ಬಗ್ಗೆ ಶಿಕ್ಷಣ ಇಲಾಖೆಯು ಆಯುಕ್ತರು ಕಾಲೇಜು ಶಿಕ್ಷಣ ಇಲಾಖೆಯಲ್ಲಿ ನೋಂದಾಯಿಸಿಕೊಳ್ಳುವುದಕ್ಕೆ ಸುತ್ತೋಲೆ ಹೊರಡಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಇನ್ನುಮುಂದೆ ಕೋಚಿಂಗ್ ಸೆಂಟರ್ಗಳ ನೋಂದಣಿ ಕಡ್ಡಾಯವಾಗಿರುತ್ತದೆ. ಸರ್ಕಾರದಿಂದ ಅನುಮತಿ ನೀಡದರಷ್ಟೇ ಕೋಚಿಂಗ್ ಸೆಂಟರ್ ಆರಂಭಿಸಬಹುದು.



