ಬೆಂಗಳೂರು : ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡುವ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಸಾಂಕೇತಿಕವಾಗಿ ಚಾಲನೆ ನೀಡಿದ್ರು.
ಶಿವಾಜಿನಗರದ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ನೀಡುವ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಇಡೀ ದೇಶದಾದ್ಯಂತ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕಾ ಅಭಿಯಾನ ಆರಂಭಿಸಿದೆ. ರಾಜ್ಯದಲ್ಲಿಯೂ ಸಾಂಕೇತಿಕವಾಗಿ ಇಂದು ಚಾಲನೆ ನೀಡಿದ್ದೇವನೆ. ಕೆಂದ್ರ ಸರ್ಕಾರ 3 ಲಕ್ಷ ಲಸಿಕೆ ನೀಡಿದ್ದು, ರಾಜ್ಯದಲ್ಲಿ 1 ಲಕ್ಷ ಲಸಿಕೆ ಸಂಗ್ರಹವಿದೆ. ಒಟ್ಟು 4 ಲಕ್ಷ ಲಸಿಕೆ ಸಂಗ್ರವಿದ್ದು, ಖಾಲಿಯಾಗುವವರೆಗೆ ಲಸಿಕೆ ನೀಡುತ್ತೇವೆ ಎಂದು ತಿಳಿಸಿದರು. .
ಕೊರೊನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷಾ ಕವಚವಾಗಿದೆ. ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಸೂಚನೆಗಳಂತೆ, ಆದ್ಯತೆಯ ಮೇರೆಗೆ ಲಸಿಕೆ ನೀಡಲಾಗುತ್ತಿದೆ. ಅರ್ಹರು ನೋಂದಣಿ ಮಾಡಿಸಿಕೊಂಡು, ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಿರಿ. ಸರ್ಕಾರದೊಂದಿಗೆ ಸಹಕರಿಸಿ, ಎಲ್ಲಾ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ ಎಂದು ಟ್ವೀಟ್ ಮೂಲಕ ಸಿಎಂ ಬಿ.ಎಸ್. ಯಡಿಯೂರಪ್ಪ ಸಂದೇಶ ಸಾರಿದ್ದಾರೆ.
ಕೊರೋನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷಾ ಕವಚವಾಗಿದೆ. ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಸೂಚನೆಗಳಂತೆ, ಆದ್ಯತೆಯ ಮೇರೆಗೆ ಲಸಿಕೆ ನೀಡಲಾಗುತ್ತಿದೆ. ಅರ್ಹರು ನೋಂದಣಿ ಮಾಡಿಸಿಕೊಂಡು, ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಿರಿ. ಸರ್ಕಾರದೊಂದಿಗೆ ಸಹಕರಿಸಿ, ಎಲ್ಲಾ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ.#KarnatakaFightsCorona pic.twitter.com/fwIbeMrmsR
— CM of Karnataka (@CMofKarnataka) May 1, 2021



