Connect with us

Dvgsuddi Kannada | online news portal | Kannada news online

ಅನುಮತಿ ಇಲ್ಲದಿದ್ದರೂ ಖಾಸಗಿ ಶಾಲೆಗಳ 1ರಿಂದ 6ನೇ ತರಗತಿ ಆರಂಭ; ಶಾಲೆಗಳ ವಿರುದ್ಧ ಕಠಿಣ ಕ್ರಮ: ಸುಧಾಕರ್

ಪ್ರಮುಖ ಸುದ್ದಿ

ಅನುಮತಿ ಇಲ್ಲದಿದ್ದರೂ ಖಾಸಗಿ ಶಾಲೆಗಳ 1ರಿಂದ 6ನೇ ತರಗತಿ ಆರಂಭ; ಶಾಲೆಗಳ ವಿರುದ್ಧ ಕಠಿಣ ಕ್ರಮ: ಸುಧಾಕರ್

ಬೆಂಗಳೂರು: ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1-6ನೇ ತರಗತಿಯ  ಶಾಲೆ ಪುನರಾರಂಭಿಸಿರುವುದರ ಬಗ್ಗೆ ದೂರು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ನೆರೆಯ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದು ನನ್ನನ್ನು ಚಿಂತೆಗೀಡುಮಾಡಿದೆ. ಇದನ್ನು ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿ, ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸಿವುದು, ಭೌತಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು ಎಂದಿದ್ದಾರೆ.

ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1-6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ ಬಗ್ಗೆ ದೂರು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ನನ್ನ ಮನವಿ ಎಂಬುದಾಗಿ ತಿಳಿಸಿದ್ದಾರೆ.

60 ವರ್ಷ ಮೇಲ್ಪಟ್ಟವರು, 45 ವರ್ಷ ಮೇಲ್ಪಟ್ಟು ಸಹ-ಅಸ್ವಸ್ಥತೆ ಹೊಂದಿರುವವರು ತಪ್ಪದೇ ಆದಷ್ಟು ಬೇಗ ಕೊರೊನಾ ಲಸಿಕೆ ಪಡೆಯಬೇಕೆಂದು ಕೋರುತ್ತೇನೆ. ನಮ್ಮ ಮನೆಗಳಲ್ಲಿ, ಬಂಧು-ಬಳಗದಲ್ಲಿ, ಸ್ನೇಹಿತರಲ್ಲಿ, ನೆರೆಹೊರೆಗಳಲ್ಲಿ ಕೊರೊನಾ ಲಸಿಕೆ ಪಡೆಯಲು ಅರ್ಹ ವ್ಯಕ್ತಿಗಳಿದ್ದರೆ ಅವರಿಗೆ ಲಸಿಕೆ ಪಡೆಯುವಂತೆ ಅರಿವು ಮೂಡಿಸಿ, ಸ್ಫೂರ್ತಿ ತುಂಬೋಣ ಎಂದಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top