ಬೆಂಗಳೂರು: ಕೊರೊನಾ ಎರಡನೆಯ ಅಲೆ ತನ್ನ ವೇಗವನ್ನು ಪಡೆದುಕೊಳ್ಳುತ್ತಿದೆ. ಇನ್ನೆರಡು ತಿಂಗಳು ಇದು ತೀರಾ ಅಪಾಯಕಾರಿಯಾಗಿದೆ. ಹೀಗಾಗಿ 2 ತಿಂಗಳ ಕಾಲ ಜನ ಎಚ್ಚರಿಕೆಯಿಂದ ಇರಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಕೊರೊನಾ ಎರಡನೆಯ ಅಲೆ ಹೆಚ್ಚಾಗುತ್ತಿದ್ದು, ಇದಾಗಲೇ ರಾಜ್ಯ ಸರ್ಕಾರ ಇದಾಗಲೇ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಕೆಮ್ಮು, ನೆಗಡಿ ಕಾಣಿಸಿಕೊಂಡರೆ ನಿರ್ಲಕ್ಷ್ಯ ತೋರದೆ ಪರೀಕ್ಷೆ ಮಾಡಿಸಿಕೊಳ್ಳಬೇಕು. ದೇಶದಲ್ಲಿ 700ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಇಂತಹ ಪ್ರಕರಣ ಸದ್ಯ ಪತ್ತೆಯಾಗಿಲ್ಲ. ಆದ್ದರಿಂದ ಎಲ್ಲ ರೀತಿಯ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಿದೆ ಎಂದರು.
ಸಭೆ-ಸಮಾರಂಭಗಳಲ್ಲಿ, ಅಂಗಡಿ ಮುಂಗಟ್ಟುಗಳಲ್ಲಿ, ಮಾಲ್, ಹೋಟೆಲುಗಳಲ್ಲಿ ನಿಯಮಿತ ಜನಸಂದಣಿ, ಸಾಮಾಜಿಕ ಅಂತರ ನಿಯಮಗಳು ಉಲ್ಲಂಘನೆಯಾದಲ್ಲಿ ಹವಾ ನಿಯಂತ್ರಿತವಲ್ಲದ ಸಭಾಂಗಣ/ಸ್ಥಳಗಳ ಮಾಲೀಕರಿಗೆ ₹5,000 ಮತ್ತು ಹವಾನಿಯಂತ್ರಿತ ಸಭಾಂಗಣ, ಸ್ಟಾರ್ ಹೋಟೆಲ್ ಹಾಗೂ ಸಾರ್ವಜನಿಕ ಸಭೆಗಳ ಆಯೋಜಕರಿಗೆ ₹10,000 ದಂಡ ವಿಧಿಸಲಾಗುವುದು.
2/2@DHFWKA pic.twitter.com/ySXIAGNVDX
— Dr Sudhakar K (@DrSudhakar_) March 25, 2021
ಈ ಕುರಿತು ಟ್ವೀಟ್ ಮಾಡಿರುವ ಡಾ.ಸುಧಾಕರ್, ಸಭೆ-ಸಮಾರಂಭಗಳಲ್ಲಿ, ಅಂಗಡಿ ಮುಂಗಟ್ಟುಗಳಲ್ಲಿ, ಮಾಲ್, ಹೋಟೆಲುಗಳಲ್ಲಿ ನಿಯಮಿತ ಜನಸಂದಣಿ, ಸಾಮಾಜಿಕ ಅಂತರ ನಿಯಮಗಳು ಉಲ್ಲಂಘನೆಯಾದಲ್ಲಿ ಹವಾ ನಿಯಂತ್ರಿತವಲ್ಲದ ಸಭಾಂಗಣ/ಸ್ಥಳಗಳ ಮಾಲೀಕರಿಗೆ 5 ಸಾವಿರ ರೂಪಾಯಿ ಮತ್ತು ಹವಾನಿಯಂತ್ರಿತ ಸಭಾಂಗಣ, ಸ್ಟಾರ್ ಹೋಟೆಲ್ ಹಾಗೂ ಸಾರ್ವಜನಿಕ ಸಭೆಗಳ ಆಯೋಜಕರಿಗೆ 10 ಸಾವಿರ ರೂಪಾಯಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.



