ಹಾವೇರಿ: ನಗರದ ಶಿವಶಕ್ತಿ ಪ್ಯಾಲೆಸ್ ಲಾಡ್ಜ್ ನಲ್ಲಿ ದಾಖಲೆ ಇಲ್ಲದ 58 ಲಕ್ಷ ರೂ ಹಣ ಪತ್ತೆಯಾಗಿದೆ . ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ಮಾಡಿ ಪೊಲೀಸರು ದಾಖಲೆ ಇಲ್ಲದ ಹಣ ಇಟ್ಟುಕೊಂಡಿದ್ದ ನಾಲ್ವರನ್ನು ವಶಕ್ಕೆ ಪಡೆದು ತನಿಖೆಯನ್ನ ಆರಂಭಿಸಿದ್ದಾರೆ.
ಅಕ್ರಮ ಎಸಗುವ ಉದ್ದೇಶದಿಂದ ಆರೋಪಿಗಳು ದಾಖಲೆಗಳಿಲ್ಲದ ಹಣ ಇಟ್ಟುಕೊಂಡು ಬಂದಿದ್ದರು ಎಂಬ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ರವಿ , ಗಣಪತಿ , ಅನಿಲ್ , ಚನ್ನಪ್ಪ ಬಂಧಿತ ಆರೋಪಿಗಳಾಗಿದ್ದಾರೆ. ಮೂವರು ಆರೋಪಿಗಳು ಬೆಳಗಾವಿ ಮೂಲದವರು , ಒಬ್ಬ ಬೆಂಗಳೂರಿನ ಕೆಂಗೇರಿ ಮೂಲದವರು ಎಂದು ಗುರುತಿಸಲಾಗಿದೆ.
58 ಲಕ್ಷ ರೂ . ಹಣ , ಹಣ ಎಣಿಸುವ ಎಲೆಕ್ಟ್ರಾನಿಕ್ ಯಂತ್ರ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ . ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿರೋ ಪೊಲೀಸರು ಈ ಕುರಿತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ರವಾನಿಸಿದ್ದಾರೆ.



