Connect with us

Dvgsuddi Kannada | online news portal | Kannada news online

ಕರ್ಫ್ಯೂ ಸಮಯದಲ್ಲಿ ಬದಲಾವಣೆ; 12 ಗಂಟೆವರೆಗೆ ದಿನಸಿ ಅಂಗಡಿಗೆ ಅವಕಾಶ; ಸಂತೆ, ಮಾರುಕಟ್ಟೆ ಸಂಫೂರ್ಣ ಬಂದ್

ಪ್ರಮುಖ ಸುದ್ದಿ

ಕರ್ಫ್ಯೂ ಸಮಯದಲ್ಲಿ ಬದಲಾವಣೆ; 12 ಗಂಟೆವರೆಗೆ ದಿನಸಿ ಅಂಗಡಿಗೆ ಅವಕಾಶ; ಸಂತೆ, ಮಾರುಕಟ್ಟೆ ಸಂಫೂರ್ಣ ಬಂದ್

ಬೆಂಗಳೂರು: ಕೊರೊನಾ ಕರ್ಫ್ಯೂ ಮಾರ್ಗಸೂಚಿಯನ್ನು ಕರ್ನಾಟಕ ಸರ್ಕಾರ ಪರಿಷ್ಕರಿಸಿದೆ. ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿಗಳನ್ನು ತೆರೆಯಲು ನಾಳೆಯಿಂದಲೇ ಮೇ.02 (ಭಾನುವಾರ) ಅನ್ವಯವಾಗುವಂತೆ ಅವಕಾಶ ನೀಡಿ ಸರ್ಕಾರ ಹೊಸ ಆದೇಶ ಹೊರಡಿಸಿದೆ.

ಹಾಪ್​ಕಾಮ್ಸ್​, ಹಾಲಿನ ಬೂತ್​, ತಳ್ಳುವ ಗಾಡಿಗಳಿಗೆ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಸಂತೆ ಮತ್ತು ಮಾರುಕಟ್ಟೆಗಳು ಸಂಪೂರ್ಣ ಬಂದ್ ಆಗಿರಲಿವೆ.

ಮಾರುಕಟ್ಟೆಗಳಲ್ಲಿ ಜನಸಂದಣಿ ತಪ್ಪಿಸಲು ಸರ್ಕಾರ ಈ ಹೊಸ ನಿರ್ಧಾರ ಕೈಗೊಳ್ಳಲಾಗಿದ್ದು, ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಲಾಗಿದ್ದು, ಕೊವಿಡ್​ ಮಾರ್ಗಸೂಚಿ ಪಾಲಿಸಿ ವ್ಯಾಪಾರ ಮಾಡಬೇಕು ಎಂದು ನಿಯಮ ರೂಪಿಸಲಾಗಿದೆ.

ದಿನಸಿ ಅಂಗಡಿಗಳಿಗೆ 10 ಯಿಂದ ಮಧ್ಯಾಹ್ನ 12ರವರೆಗೆ ವಿಸ್ತರಿಸಲಾಗಿದೆ. ಬೆಳಗ್ಗೆ 6ರಿಂದ ಸಂಜೆ 6 ಗಂಟೆ ವರೆಗೆ ವ್ಯಾಪಾರಿಗಳು ತಳ್ಳುವ ಗಾಡಿಯಲ್ಲಿ ತರಕಾರಿ, ಹಣ್ಣು ಮಾರಾಟ ಮಾಡಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡುವಂತಿಲ್ಲ ಎಂಬ ಶರತ್ತಿನೊಂದಿಗೆ ಅವಕಾಶ ಒದಗಿಸಲಾಗಿದೆ.

IMG 20210501 WA0027

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top