ಮೈಸೂರು: ಸ್ಯಾಂಡಲ್ ವುಡ್ ನಟ ದಿವಂಗತ ಪುನೀತ್ ರಾಜಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಮರಣೋತ್ತರ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ಘೋಷಣೆ ಮಾಡಿದೆ.
ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಮೈಸೂರು ವಿವಿಯಿ ಗೌರ ಡಾಕ್ಟರೇಟ್ ನೀಡಲು ತೀರ್ಮಾನಿಸಿದೆ.ಪುನೀತ್ ರಾಜಕುಮಾರ್ ಕುಟುಂಬದವರನ್ನು ಸಂಪರ್ಕ ಮಾಡಿದ್ದೇವೆ. ಪುನೀತ್ ಪತ್ನಿ ಅಶ್ವಿನಿಯವರು ಘಟಿಕೋತ್ಸವಕ್ಕೆ ಬರಲು ಒಪ್ಪಿದ್ದಾರೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೋ ಹೇಮಂತ್ ಕುಮಾರ್ ತಿಳಿಸಿದ್ದಾರೆ.
ಮಾ. 22 ಕ್ಕೆ ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ನಟ ಪುನೀತ್ ರಾಜಕುಮಾರ ( ಮರಣೋತ್ತರ), ಹಿರಿಯ ವಿಜ್ಞಾನಿ ಡಾ ವಿ.ಎಸ್. ಅತ್ರೆ ಮತ್ತು ಜನಪದ ಗಾಯಕ ಮಳ್ಳವಳ್ಳಿ ಮಹಾದೇವಸ್ವಾಮಿ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ.



