Connect with us

Dvgsuddi Kannada | online news portal | Kannada news online

21 ದಿನದ ನಂತರ ಉಕ್ರೇನ್ ನಿಂದ ನವೀನ್ ಪಾರ್ಥಿವ ಶರೀರ ತಾಯ್ನಾಡಿಗೆ; ಕುಟುಂಬಕ್ಕೆ ಹಸ್ತಾಂತರಿಸಿದ ಸಿಎಂ

ಪ್ರಮುಖ ಸುದ್ದಿ

21 ದಿನದ ನಂತರ ಉಕ್ರೇನ್ ನಿಂದ ನವೀನ್ ಪಾರ್ಥಿವ ಶರೀರ ತಾಯ್ನಾಡಿಗೆ; ಕುಟುಂಬಕ್ಕೆ ಹಸ್ತಾಂತರಿಸಿದ ಸಿಎಂ

ಬೆಂಗಳೂರು: ಯುದ್ಧಪೀಡಿತ ಉಕ್ರೇನ್ ನಲ್ಲಿ ರಷ್ಯಾ ದಾಳಿಯಿಂದ ಸಾವನ್ನಪ್ಪಿದ್ದ ಹಾವೇರಿಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರ 21 ದಿನಗಳ ನಂತರ ತಾಯ್ನಾಡಿಗೆ ಬಂದಿದೆ.

ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ವಿಭಾಗದಲ್ಲಿ ಪಾರ್ಥಿವ ಶರೀರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೀನ್ ಕುಟುಂಬಕ್ಕೆ ಹಸ್ತಾಂತರಿಸಿದರು.ದುಬೈ ಮೂಲಕ ಇವತ್ತು ಮುಂಜಾನೆ 3 ಗಂಟೆ ಸಮಯದಲ್ಲಿ ನವೀನ್ ಪಾರ್ಥಿವ ಶರೀರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.

ಈ ಸಂದರ್ಭದಲ್ಲಿ ಸಂಸದ ಶಿವಕುಮಾರ್ ಉದಾಸಿ, ಸಚಿವ ಡಾ.ಕೆ.ಸುಧಾಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಂತಿಮ ದರ್ಶನ ಪಡೆದರು. ಮೃತ ನವೀನ್ ಅಣ್ಣ ಹರ್ಷ ಸೇರಿದಂತೆ ಗ್ರಾಮಸ್ಥರು ಪಾರ್ಥಿವ ಶರೀರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ತೆಗೆದುಕೊಂಡು ಆಂಬ್ಯುಲೆನ್ಸ್​ ಮೂಲಕ ಹಾವೇರಿ ಜಿಲ್ಲೆಯ ಸ್ವಗ್ರಾಮಕ್ಕೆ ತೆಗೆದುಕೊಂಡು ಹೋದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top