Connect with us

Dvg Suddi-Kannada News

ಬೇಸಿಗೆ ಬಿಸಿಲಿನ ತಾಪಮಾನ ಏರಿಕೆ; ರಾಜ್ಯದ ಕೆಲ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ಪ್ರಮುಖ ಸುದ್ದಿ

ಬೇಸಿಗೆ ಬಿಸಿಲಿನ ತಾಪಮಾನ ಏರಿಕೆ; ರಾಜ್ಯದ ಕೆಲ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ರಾಜ್ಯದ ಕಲ್ಯಾಣ ಕರ್ನಾಟಕ ಮತ್ತು ಮುಂಬೈ ಕರ್ನಾಟಕ ಕೆಲ ಜಿಲ್ಲೆಗಳ ಸಮಯದಲ್ಲಿ ಬದಲಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿ ಕೆಲಸದ ಸಮಯವನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30ಗಂಟೆವರೆಗೆ ಬದಲಾವಣೆ ಮಾಡಿ ಆದೇಶಿಸಿದ್ದಾರೆ.

ಈ ಆದೇಶ ಏ.12 ನಾಳೆಯಿಂದ ಜಾರಿಗೆ ಬರಲಿದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಕಲಬುರ್ಗಿ ವಿಭಾಗದ ಜಿಲ್ಲೆಗಳ ಸರ್ಕಾರಿ ಕಚೇರಿಯ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಬಿಎಸ್ ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ತಾಪಮಾನ ಹೆಚ್ಚಾದ ಹಿನ್ನೆಲೆ ಸರ್ಕಾರಿ ಕಚೇರಿಗಳ ಕೆಲಸದ ವೇಳೆಯಲ್ಲಿ ಬದಲಾವಣೆ ಮಾಡಲಾಗಿದೆ. ಸರ್ಕಾರಿ ಕಚೇರಿ ಕೆಲಸದ ಸಮಯವನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30ಗಂಟೆವರೆಗೆ ಬದಲಾವಣೆ ಮಾಡಲಾಗಿದೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top