ಬೆಂಗಳೂರು: ರಾಜ್ಯದಲ್ಲಿ ಅಹಿಂದ ಸಮಾವೇಶ ಮಾದರಿಯಲ್ಲಿಯೇ ಹಿಂದ ಸಮಾವೇಶ ನಡೆಸಿ ಬಿಜೆಪಿಗೆ ಬೆಂಬಲ ನೀಡಲಾಗುವುದು ಎಂದು ಹಿಂದುಳಿದ ದಲಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಕೆ.ಮುಕುಡಪ್ಪ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಶೀಘ್ರದಲ್ಲೇ ಬೆಂಗಳೂರಿನಲ್ಲಿ ಮೊದಲ ಸಮಾವೇಶ ನಡೆಯಲಿದ್ದು, ಬಳಿಕ ಜಿಲ್ಲಾ ಮಟ್ಟದಲ್ಲಿ ಸಮಾವೇಶ ನಡೆಯಲಿದೆ. ಹಿಂದುಳಿದ ಮತ್ತು ದಲಿತರಿಗೆ ರಾಜಕೀಯ ಸ್ಥಾನಮಾನ ಸಿಗಬೇಕು. ಈ ನಿಟ್ಟಿನಲ್ಲಿ ಹೋರಾಟ ನಡೆಸಲು ಒಕ್ಕೂಟ ರಚಿಸಲಾಗಿದೆ ಎಂದರು.
ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ದಲಿತ ಸಮುದಾಯಗಳಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಅವಕಾಶ ಸಿಕ್ಕಿದೆ. ರಾಷ್ಟ್ರಪತಿ, ರಾಜ್ಯಪಾಲರ ಹುದ್ದೆಗಳಿಗೆ ದಲಿತ ಸಮುದಾಯವರಿಗೆಅವಕಾಶ ನೀಡಲಾಗಿದೆ. ಹೀಗಾಗಿ ನಮ್ಮ ಒಕ್ಕೂಟ ಬಿಜೆಪಿ ಬೆಂಬಲಿಸಲು ತೀರ್ಮಾನಿಸಿದೆ. ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಪ್ರಚಾರ ನಡೆಸಲಾಗುವುದು. ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಹಿಂದ ಸಭೆಗಳನ್ನು ನಡೆಸಲಾಗಿದೆ. ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದರು.
ದಲಿತರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಕಾಳಜಿ ಹೊಂದಿದ್ದಾರೆ. ಗೋಹತ್ಯೆ ನಿಷೇಧ, ನಾಗರಿಕ ಸಂಹಿತೆ ಜಾರಿಗೆ ತರಲು ನಮ್ಮ ಬೆಂಬಲವಿದೆ ಎಂದರು. ಈ ಸತ್ತಾಪುರದ ಲಂಬಾಣಿ ಸಮಾಜದ ಮುಖಂಡ ಸುರೇಶ್ ರಾಥೋಡ್, ಮಂಡ್ಯ ವಿಶ್ವಕರ್ಮ ಸಮಾಜದ ಸಿದ್ದ ಆಚಾರಿ, ವಿಶ್ವ ಚಲವಾದಿ ಮಹಾಸಭಾದ ಎನ್. ತಿಪ್ಪೇಸ್ವಾಮಿ ಇದ್ದರು.



