Connect with us

Dvgsuddi Kannada | online news portal | Kannada news online

ಸರ್ಕಾರಿ ನೌಕರರ 7ನೇ ವೇತನ ಆಯೋಗ ರಚನೆ; ಸಂಘದಿಂದ ಸಿಎಂಗೆ ಅಭಿನಂಧನೆ; ನೌಕರರು ಒಂದು ಗಂಟೆ ಹೆಚ್ಚುವರಿ ಕೆಲಸ ಮಾಡುವಂತೆ ಸೂಚನೆ

ಪ್ರಮುಖ ಸುದ್ದಿ

ಸರ್ಕಾರಿ ನೌಕರರ 7ನೇ ವೇತನ ಆಯೋಗ ರಚನೆ; ಸಂಘದಿಂದ ಸಿಎಂಗೆ ಅಭಿನಂಧನೆ; ನೌಕರರು ಒಂದು ಗಂಟೆ ಹೆಚ್ಚುವರಿ ಕೆಲಸ ಮಾಡುವಂತೆ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ರಚನೆ ಮಾಡಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಮಾಡಿ ಏಳನೇ ವೇತನ ಆಯೋಗ ರಚನೆ ಮಾಡಿರುವುದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನೇತೃತ್ವದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರುಗಳ ನಿಯೋಗವು ಇಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ, ಸಿಎಂ ಬೊಮ್ಮಾಯಿ, ಎಲ್ಲರೂ ಒಂದಾಗಿ ಸುಭಿಕ್ಷ ನಾಡನ್ನು ಕಟ್ಟೋಣ. ಪ್ರಾಮಾಣಿಕತೆ, ನಿಷ್ಠೆ ಹಾಗು ಕರ್ತವ್ಯ ಪ್ರಜ್ಞೆಯಿಂದ ಕೆಲಸ ಮಾಡಿ. ಬಡವರಿಗೆ, ಜನಪರವಾದ ಕೆಲಸ ಮಾಡಿದರೆ ಕರ್ನಾಟಕ ಅಭಿವೃದ್ಧಿಯಾಗುತ್ತದೆ. ನವ ಕರ್ನಾಟಕದಿಂದ ನವ ಭಾರತ ನಿರ್ಮಿಸೋಣ. ದೇಶದ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಕನಸಿಗೆ ಕರ್ನಾಟಕ ಒಂದು ಟ್ರಿಲಿಯನ್ ಡಾಲರ್ ಕೊಡುಗೆ ನೀಡಬೇಕು. ಹೀಗಾಗಿ ಪ್ರತಿದಿನ ಒಂದು ಗಂಟೆ ಹೆಚ್ಚು ಕೆಲಸ ಮಾಡುವಂತೆ ಸರ್ಕಾರಿ ನೌಕರರಿಗೆ ಕರೆ ನೀಡಿದ್ದಾರೆ.

ಕರ್ನಾಟಕದಲ್ಲಿ ವೇತನ ಆಯೋಗವನ್ನು ಐದು ವರ್ಷವಾದ ಕೂಡಲೇ ಘೋಷಣೆಯಾಗಿರುವುದು ನಮ್ಮ ಸರ್ಕಾರದ ಅವಧಿಯಲ್ಲಿ ಎಂದು ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವರ್ಷದಿಂದ ವರ್ಷಕ್ಕೆ ಹಣದುಬ್ಬರ ಹೆಚ್ಚಾಗುತ್ತದೆ. ಸರ್ಕಾರಿ ನೌಕರರಾಗಿ ಸೇವೆಗೆ ಸೇರಿದ ಸಂದರ್ಭಕ್ಕೂ ಈಗಿನ ಸಂದರ್ಭಕ್ಕೂ ವ್ಯತ್ಯಾಸವಿರುತ್ತದೆ. ಸಮಯ ಮತ್ತು ಹಣ ಎರಡೂ ಬಹಳ ಮುಖ್ಯ. ಸರಿಯಾದ ಸಮಯದಲ್ಲಿ ಸರಿಯಾದ ಸಂಪಾದನೆಯಾದರೆ ಬದುಕಿಗೆ ಪ್ರೇರಣೆ. ಅದಕ್ಕಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಬಿ.ಎಸ್.ಯಡಿಯೂರಪ್ಪ ಅವರು ಕೂಡ ಇದಕ್ಕೆ ಒತ್ತಾಸೆಯಾಗಿದ್ದರು. ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರೂ ಒತ್ತಾಯ ಮಾಡಿದ್ದರು ಎಂದು ತಿಳಿಸಿದರು.

ಅತ್ಯಂತ ಪ್ರಾಮಾಣಿಕ, ನಿಷ್ಠಾವಂತ ಅಧಿಕಾಯಾಗಿದ್ದ ಡಾ: ಸುಧಾಕರ್ ರಾವ್ ದಕ್ಷತೆಯಿಂದ ಕೆಲಸ ಮಾಡಿದವರು. ಪ್ರಭಾವಕ್ಕೆ ಮಣಿಯದವರು. ನ್ಯಾಯಸಮ್ಮತವಾದ 7 ನೇ ವೇತನ ಆಯೋಗದ ವರದಿ ಬರಲಿ ಎಂದು ಶುದ್ಧಹಸ್ತ, ಶುದ್ಧ ಅಂತ:ಕರಣವುಳ್ಳ ಸುಧಾಕರ್ ರಾವ್ ಅವರ ಆಯ್ಕೆ ಆಗಿದೆ. ಇದಕ್ಕೆ ನೌಕರರ ಸಹಕಾರ ಕೂಡ ಅಗತ್ಯ. ಇದನ್ನು ಸಕಾರಗೊಳಿಸಿ ಎಲ್ಲರಿಗೂ ಒಳ್ಳೆಯದು ಆಗಬೇಕು. ಚಿಂತೆ ಮಾಡಬೇಡಿ. ಮುಂದಿನ ಸರ್ಕಾರ ನಮ್ಮದೇ ಬರಲಿದ್ದು, ಇದರ ಅನುಷ್ಠಾನ ನಾವೇ ಮಾಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top