ಸಂಕೇಶ್ವರ: ಇನ್ಮುಂದೆ ಆದಾಯ-ಜಾತಿ ಪ್ರಮಾಣ ಪತ್ರ ಸೇರಿದಂತೆ ಎಲ್ಲಾ ಸರ್ಕಾರಿ ಸೇವೆ, ದಾಖಲೆಗಳು ಗ್ರಾಮ ಪಂಚಾಯತಿ ಮಟ್ಟದಲ್ಲಿಯೇ ಸಿಗುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸಂಕೇಶ್ವರದಲ್ಲಿ ಪುರ ಸಭೆಯ ನೂತನ ಕಾರ್ಯಾಲಯ, ರೈತ ಸಂಪರ್ಕ ಕೇಂದ್ರ, ಬಸ್ ನಿಲ್ದಾಣಗಳನ್ನು ಉದ್ಘಾಟಿಸಿ ಮಾತನಾಡಿದರು. ಮುಂಬರುವ ಜನವರಿ 26ರಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಎಲ್ಲಾ ಸೇವೆ ಸಿಗಲಿದೆ. ಇದನ್ನು ಪ್ರಾಯೋಗಿಕವಾಗಿ 5 ಜಿಲ್ಲೆಗಳಲ್ಲಿ ನಡೆಸಿ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದರು.



