ಬೆಂಗಳೂರು; ಪೌತಿಖಾತೆ ಆಂದೋಲನದ ಮೂಲಕ ಆಸ್ತಿಯ ಖಾತೆ ಹಕ್ಕುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲಾಗುವುದು. ಪೌತಿ ಖಾತೆ ( ಭೂ ಮಾಲೀಕ ತಂದೆ ಮರಣ ಹೊಂದಿದ್ದರೆ) ಹೊಂದಿದ ಖಾತೆದಾರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಆರ್ಥಿಕ ಸೌಕರ್ಯ ನೀಡಲಾಗುವುದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.
ಹೊಸಕೋಟೆಯಲ್ಲು ಆಯೋಜಿಸಿದ್ದ ಪೌತಿಖಾತೆ ಆಂದೋಲನದಲ್ಲಿ ಖಾತೆ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು, ರೈತ ಕುಟುಂಬಗಳು ತಮ್ಮ ಆಸ್ತಿಗಳನ್ನು ಭಾಗ ಮಾಡಿಕೊಳ್ಳುವುದು. ಈ ಹಿಂದೆ ಬಹಳ ಸವಾಲಿನ ಕಾರ್ಯವೆನಿಸಿತ್ತು.ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ,ಪೌತಿ ಖಾತೆ ಆಂದೋಲನದ ಪರಿಣಾಮವಾಗಿ ಜನರ ಮನೆ ಬಾಗಿಲಿಗೆ ದಾಖಲೆ ಒದಗಿದಲಿದೆ. ಆಸ್ತಿಯಲ್ಲಿ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಸಮಾನ ಹಕ್ಕುಗಳು ಇವೆ ಎಂದರು.
ಯಾವುದೇ ಅನಗತ್ಯ ತಂಟೆ,ತಕರಾರುಗಳಿಗೆ ಅವಕಾಶವಾಗದಂತೆ ನ್ಯಾಯಯುತ ಮಾರ್ಗದಲ್ಲಿ ಆಸ್ತಿ ವಿಭಜನೆ ಮಾಡಿಕೊಂಡು ಪ್ರತಿಯೊಬ್ಬರು ತಮ್ಮ ಪಾಲಿನ ಖಾತೆಗಳನ್ನು ಹೊಂದಿದರೆ, ಸರ್ಕಾರದ ವಿವಿಧ ಯೋಜನೆಗಳು ಮತ್ತು ಸಾಲ ಸೌಲಭ್ಯಗಳನ್ನು ಪಡೆಯಲು ಸುಲಭವಾಗುತ್ತದೆ ಎಂದರು.



