ಬೆಳಗಾವಿ: ಕೊರೊನಾ ನಿಯಂತ್ರಣಕ್ಕೆ ಹಣ ಹೊಂದಿಸಲು ಪೆಟ್ರೋಲ್, ಡೀಸೆಲ್ ಬೆಲೆ ಜಾಸ್ತಿ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ.
ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುವ ಉಮೇಶ ಕತ್ತಿ ಈಗ ಮತ್ತೊಂ ಹೇಳಿಕೆ ನೀಡಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರಕ್ಕೆ ಹಣ ಬೇಕಾಗಿದೆ. ಸರ್ಕಾರಕ್ಕೆ ಹಣ ಬೇಕು ಎಂದರೆ ಎಲ್ಲಿಂದ ತರಬೇಕು? ಅದಕ್ಕಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ ಎಂದು ಬೆಳಗಾವಿಯಲ್ಲಿಈ ಹೇಳಿದ್ಧಾರೆ.
ಇದರ ಜೊತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಳವಾಗಿದೆ. ಅಲ್ಲದೆ, ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರಗಳು ತೆರಿಗೆ ಹೆಚ್ಚಳ ಮಾಡಿವೆ. ಈ ಎಲ್ಲ ಕಾರಣಗಳಿಂದ ಬೆಲೆ ಹೆಚ್ಚಳವಾಗಿದೆ ಎಂದು ವಿವರಣೆ ನೀಡಿದರು.ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಂಬಂಧ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಭೆಗಳನ್ನು ನಡೆಸುತ್ತಿದ್ದಾರೆ. ದೀಪಾವಳಿ ವೇಳೆಗೆ ಬೆಲೆ ಕಡಿಮೆಯಾಗಬಹುದು ಎಂದು ವಿಶ್ವಾಸವಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಹೆಬ್ಬೆಟ್ ಗಿರಾಕಿ ಎಂಬ ಸಿದ್ದರಾಮಯ್ಯ ಟೀಕೆಗೆ ಪ್ರತಿಕ್ರಿಯಿಸಿ, ಪ್ರಧಾನಿ ಮೋದಿ ಅವರು ಜನಪರ ಆಡಳಿತವನ್ನು ನೀಡುತ್ತಿದ್ದಾರೆ. ದೇಶದಲ್ಲ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಆದರೆ, ಕಾಂಗ್ರೆಸ್‌ನವರಿಗೆ ಮಾಡಲು ಕೆಲಸ ಇಲ್ಲ. ಅದಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.



