ದಾವಣಗೆರೆ: 2020-21ನೇ ಸಾಲಿನ ಸಾಮಾನ್ಯ/ವಿಶೇಷ ಘಟಕ/ಗಿರಿಜನ ಉಪಯೋಜನೆಯಡಿ ಸಾಂಸ್ಕೃತಿಕ ಸಂಘ-ಸಂಸ್ಥೆಗಳ ಕಾರ್ಯಕ್ರಮಗಳಿಗೆ ಪ್ರಾಯೋಜನೆ ನೀಡಲು ಸೇವಾ ಸಿಂಧು ಮೂಲಕ ಮತ್ತೊಮ್ಮೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಗಿರಿಜನ ಉತ್ಸವ/ಜನಪರ ಉತ್ಸವ/ಮಹಿಳಾ ಸಾಂಸ್ಕøತಿಕ ಉತ್ಸವ/ಸುಗ್ಗಿ-ಹುಗ್ಗಿ ಒಂದು ದಿನದ ಕಾರ್ಯಕ್ರಮವಾಗಿದ್ದು ಆಸಕ್ತ ಕಲಾವಿದರು ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸ್ವವಿವರದೊಂದಿಗೆ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾಡಳಿತ ಭವನ, ಮೊದಲನೇ ಮಹಡಿ, ಕೊಠಡಿ ಸಂಖ್ಯೆ :27, ಪಿ.ಬಿ.ರಸ್ತೆ ದಾವಣಗೆರೆ ದೂ.ಸಂ : 08192-234849ನ್ನು ಸಂಪರ್ಕಿಸಬಹುದೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



